ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.
ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.
ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…