ಭವಿಷ್ಯ

ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

1329

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ  ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಆ ಎರಡು ಗಂಡಾಂತರಗಳು:-

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.

ಪ್ರಧಾನಿ ಮತ್ತು ಹೆಣ್ಣಿನ ಮೋಹ:-

ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು  ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಕುಮಾರಸ್ವಾಮಿ ಕಿಂಗ್ ಮೇಕರ್:-

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು.  ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ