ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.
ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.
ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.
ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.
ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.
ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/