ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರಕಾರ ಜನೌಷಧಿ ಮಳಿಗೆಗಳನ್ನು ಆರಂಭಿಸಿದೆ. ಹಲವು ತಾಲ್ಲೂಕು ಕೇಂದ್ರ ಗಳಲ್ಲಿಯೂ ಆರಂಭವಾಗಿದೆ. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ‘ಪ್ರಧಾನ ಮಂತ್ರಿ ಭಾರತೀಯ ಜನರಿಕ್ ಕೇಂದ್ರ’ವು ಈ ನಿಟ್ಟಿನಲ್ಲಿ ಕರ್ನಾಟಕ ಸೇರಿದಂತೆ ದೇಶದ ಅನೇಕ ಕಡೆ ಮಳಿಗೆಗಳನ್ನು ಆರಂಭಿಸಿದೆ. ಈಗ ಮಾರುಕಟ್ಟೆಯಲ್ಲಿ ಇರುವ ವಿವಿಧ ಔಷಧಿ ಅಂಗಡಿಗಳಿಗೆ ಹೋಲಿಸಿದರೆ ಈ ಜನೌಷಧಿ ಮಳಿಗೆಗಳಲ್ಲಿ ಸಿಗುವ ಜೀವನಾಶ್ಯಕ ಔಷಧಿಗಳು ಶೇ.90ರ ದರಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗುತ್ತವೆ.
ಎಲ್ಲ ವರ್ಗದವರಿಗೂ ಕಡಿಮೆ ದರದಲ್ಲಿ ದೊರೆಯುವ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದ ಕಾರ್ಯ ಶ್ಲಾಘನೀಯ. ನಗರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಬಡವರಿಗೆ ಕಡಿಮೆ ದರದಲ್ಲಿ ಔಷಧಿಯನ್ನು ವಿತರಿಸಲಾಗುತ್ತಿದೆ.
ನಿಧಾನವಾಗಿ ಈ ಜನೌಷಧಿ ಮಳಿಗೆಗಳು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಪ್ರಿಯವಾಗುತ್ತಿವೆ. ಸಣ್ಣಪುಟ್ಟ ರೋಗರುಜಿನಗಳಿಗೂ ಜನಸಾಮಾನ್ಯರು ವೈದ್ಯರ ಬಳಿಗೆ ಹೋದರೆ ದುಬಾರಿ ಬೆಲೆಯ ಬ್ರಾಂಡೆಡ್ ಔಷಧಿಯನ್ನು ಬರೆದುಕೊಡುತ್ತಾರೆ. ಇದರಲ್ಲಿ ವೈದ್ಯರು ಮತ್ತು ಔಷಧಿ ಕಂಪೆನಿಗಳ ನಂಟು ಕೂಡಾ ಪ್ರಭಾವ ಬೀರುತ್ತದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಧಾನಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ ಆನಂತರ ಭಾರತೀಯ ವೈದ್ಯಕೀಯ ಮಂಡಳಿ ಆದೇಶವೊಂದನ್ನು ಹೊರಡಿಸಿ ಇನ್ನು ಮುಂದೆ ವೈದ್ಯರು ರೋಗಿಗಳಿಗೆ ಜನರಿಕ್ ಔಷಧಿಯನ್ನೇ ಬರೆದುಕೊಡಬೇಕೆಂದು ತಿಳಿಸಿತ್ತು. ಈಗ ಎಲ್ಲೆಡೆ ಈ ಯೋಜನೆಗೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ..
ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಆರೋಗ್ಯ ಸೇವೆ ಕೈಗೆಟಕುವ ದರದಲ್ಲಿ ದೊರಕಬೇಕೆನ್ನುವ ಉದ್ದೇಶ ಇದರ ಹಿಂದಿದೆ.. ರಾಷ್ಟ್ರವೊಂದು ಅಭಿವೃದ್ಧಿಗೊಳ್ಳಬೇಕಾದಲ್ಲಿ ರಾಷ್ಟ್ರದ ಪ್ರಜೆಗಳು ಆರೋಗ್ಯವಂತರಾಗಿರುವುದು ಕೂಡ ಅಷ್ಟೆ ಮುಖ್ಯ, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ.
ಸಾರ್ವಜನಿಕರ ಕಷ್ಟವನ್ನು ದೂರಮಾಡಲು ಮನೆಬಾಗಿಲಿಗೆ ದೇವರು ಬಂದಂತಾಗಿದೆ. ಕೇಂದ್ರ ಸರ್ಕಾರ ಸಾಮಾನ್ಯ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಬೇಕೆಂಬ ನಿಟ್ಟಿನಲ್ಲಿ ಪ್ರತಿ ಜಿಲ್ಲಾ, ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಿದ್ದು ಪ್ರತಿಯೊಬ್ಬರೂ ಇಲ್ಲಿಂದಲೇ ಔಷಧಿಗಳನ್ನು ಖರೀದಿಸಬೇಕು ಎಂದು ಜನೌಷಧಿ ಕೇಂದ್ರದ ಹಿರಿಯ ಅಧಿಕಾರಿ ಡಾ.ಅನಿಲಾ ದೀಪಕ್ಶೆಟ್ಟಿ ಕರೆ ನೀಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…