ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಬೇಕಾದ ಸಾಮಾಗ್ರಿಗಳು
ಅಕ್ಕಿ – 1 ಕಪ್
ತುಪ್ಪ – 1/2 ಕಪ್
ಈರುಳ್ಳಿ – 1 ದೊಡ್ಡ ಗಾತ್ರ
ಗೋಡಂಬಿ- 5-10 ಪೀಸ್
ಶುಂಟಿ, ಬೆಳುಳ್ಳಿ – 1 ಚಮಚ
ಏಲಕ್ಕಿ, ದಾಲ್ಚಿನಿ – 1
ಒಣ ದ್ರಾಕ್ಷಿ – 5 ಪೀಸ್
ಉಪ್ಪು – ರುಚಿಗೆ
ಕೊತ್ತಂಬರಿ ಸೊಪ್ಪು – ಸ್ವಲ್ಪ
ತಯಾರಿಸುವ ವಿಧಾನ :
ಅಕ್ಕಿಯನ್ನು ತೊಳೆದು ಅದರ ನೀರನ್ನು ಪೂರ್ತಿಯಾಗಿ ಆರಲು ಬಿಡಿ. ಅಗಲವಾದ ಪಾತ್ರೆ ತೆಗೆದುಕೊಂಡು ಅದಕ್ಕೆ ತುಪ್ಪ ಹಾಕಿ ಬಿಸಿ ಮಾಡಿ, ತುಪ್ಪ ಸ್ವಲ್ಪ ಬಿಸಿಯಾದ ಮೇಲೆ ಹೆಚ್ಚಿದ ನೀರುಳ್ಳಿ ಹಾಕಿ, ನೀರುಳ್ಳಿ ಹೋಳುಗಳು ಕಂದು ಬಣ್ಣಕ್ಕೆ ಬಂದ ಕೂಡಲೇ ಅದನ್ನು ಪಾತ್ರೆಯಿಂದ ತೆಗೆದಿಡಿ, ನಂತರ ದ್ರಾಕ್ಷಿ, ಗೋಡಂಬಿ ಹುರಿಯಿರಿ, ಅದೇ ಬಾಣಲೆಗೆ ಶುಂಠಿ, ಬೆಳುಳ್ಳಿ ಹಾಕಿ ಚೆನ್ನಾಗಿ ಕಂದು ಬಣ್ಣ ಬರುವವರೆಗೆ ಕಾಯಿಸಿ, ಏಲಕ್ಕಿ, ದಾಲ್ಚಿನಿ ಹಾಕಿ ಹದವಾಗಿ ಹುರಿಯಿರಿ, ನಂತರ ಹುರಿದಿಟ್ಟ ನೀರುಳ್ಳಿ ಹಾಕಿ, ಇದಕ್ಕೆ ಅಕ್ಕಿ ಹಾಕಿ, ನೀರು ಸೇರಿಸಿ 10 ನಿಮಿಷಗಳ ಕಾಲ ಬೇಯಿಸಿ, ಬೇಯಲು ಪ್ರಾರಂಭವಾದಾಗ ಉಪ್ಪು, ಕೊಂತ್ತಂಬರಿ ಸೊಪ್ಪು ಹಾಕಿ, ಪಾತ್ರೆಯನ್ನು ಮುಚ್ಚಿಡಿ. 10 ನಿಮಿಷಗಳ ನಂತರ ಮುಚ್ಚಳ ತೆರೆದು ನೋಡಿ. ಬಿಸಿ ಬಿಸಿ ರುಚಿಕರವಾದ ತುಪ್ಪಾನ್ನ ಸವಿಯಲು ಸಿದ್ಧ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…