ಸರ್ಕಾರದ ಯೋಜನೆಗಳು

“ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

2799

 ರಾಜ್ಯದ 58 ಸಾವಿರ ಜನ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ ವಾಸಿಸುವವನೇ ಮನೆಯೊಡೆಯ ಎಂಬ ಹಕ್ಕು ನೀಡುವ ಕ್ರಾಂತಿಕಾರಿ ಕರ್ನಾಟಕ ಭೂಸುಧಾರಣೆ ಕಾಯ್ದೆಗೆ ರಾಷ್ಟ್ರಪತಿಗಳು ಕೊನೆಗೂ ಅಂಕಿತ ಹಾಕಿದ್ದಾರೆ.

ರಾಷ್ಟ್ರಪತಿಯವರಿಂದ ವಾಸಿಸುವವನೇ  ಮನೆ ಒಡೆಯ ಯೋಜನೆಗೆ ಅಂಕಿತ ಜಾರಿ:-

ವಾಸಿಸುವವನೇ  ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

ಅಂದರೆ, ದಾಖಲೆಗಳಿಲ್ಲದಿದ್ದರೂ, ಕೃಷಿ ಕಾರ್ಮಿಕ 1979ರ ಜನವರಿಗೂ ಪೂರ್ವದಲ್ಲಿ ತಾನು ವಾಸವಾಗಿರುವ ಮನೆ ಮತ್ತು ಅದಕ್ಕೆ ಹೊಂದಿಕೊಂಡ ಕನಿಷ್ಠ ಬಳುವಳಿಯ ಭೂಮಿಯು ಆತನದ್ದೇ ಎಂಬುದನ್ನು ಕಾಯ್ದೆ ಹೇಳುತ್ತದೆ.ಈ ಬಗ್ಗೆ ಶಾಸಕ ಕೆ.ಶಿವಮೂರ್ತಿ ನಾಯಕ್ ನೇತೃತ್ವದ ನಿಯೋಗ ಹಿಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿ, ವಿಧೇಯಕಕ್ಕೆ ಒಪ್ಪಿಗೆ ನೀಡುವಂತೆ ಮನವಿಯನ್ನೂ ಮಾಡಿದ್ದರು

 

ರಾಜ್ಯದ 58 ಸಾವಿರ ಜನವಸತಿಗಳಾದ ಗೊಲ್ಲರ ಹಟ್ಟಿ, ಲಂಬಾಣಿ ತಾಂಡಾ, ವಡ್ಡರ ಹಟ್ಟಿ, ಕುರುಬರ ಹಟ್ಟಿ, ನಾಯಕರ ಹಟ್ಟಿ, ಮಜರೆ ಗ್ರಾಮ, ದೊಡ್ಡಿ, ಪಾಳ್ಯ, ಕ್ಯಾಂಪ್, ಗೌಳಿ ದೊಡ್ಡಿ, ಕಾಲೋನಿಯಂತಹ ದಾಖಲೆ ಇಲ್ಲದ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವುದು ಕಾಯ್ದೆಯ ಮುಖ್ಯಉದ್ದೇಶವಾಗಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಸುದ್ದಿ

    ಟೈಮ್ ಪಾಸ್ ಮತ್ತು ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತೀದ್ದಿರಾ?, ಆರೋಗ್ಯಕ್ಕೆ ಅದು ಒಳ್ಳೆಯದಲ್ಲ!

    ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.