ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.
ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.
100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.
ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…