ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.ಉತ್ತರ ಪ್ರದೇಶ ಸರಕಾರ ಈಚೆಗಷ್ಟೇ ಬಿಡುಗಡೆ ಮಾಡಿದ್ದ ಪ್ರವಾಸೋದ್ಯಮ ಪುಸ್ತಿಕೆಯಲ್ಲಿ ತಾಜ್ ಮಹಲ್ ಉಲ್ಲೇಖವನ್ನು ಕೈಬಿಡಲಾಗಿತ್ತು. ತತ್ಪರಿಣಾಮವಾಗಿ ಭಾರೀ ಟೀಕೆ, ಟಿಪ್ಪಣಿ, ವಿವಾದ ಸೃಷ್ಟಿಯಾಗಿತ್ತು.
ಅದಾಗಿ ಇದೀಗ ccc ಅವರು ‘ಐತಿಹಾಸಿಕ ತಾಜ್ಮಹಲ್ ಕಟ್ಟಡವನ್ನು ನಿರ್ಮಿಸಿದವರು ದ್ರೋಹಿಗಳು’ ಎಂದು ಹೇಳುವ ಮೂಲಕ ಇನ್ನೊಂದು ವಿವಾದವನ್ನು ಸೃಷ್ಟಿಸಿದ್ದಾರೆ.
ಸರ್ಧಾನಾ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿರುವ ಸೋಮ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡವನ್ನು ಕಟ್ಟಿದವರು ದ್ರೋಹಿಗಳು; ಆದುದರಿಂದ ಅದಕ್ಕೆ ಭಾರತೀಯ ಇತಿಹಾಸದಲ್ಲಿ ಯಾವುದೇ ಸ್ಥಾನ ಇಲ್ಲ’ ಎಂದು ಗುಡುಗಿದ್ದಾರೆ.
“ತಾಜ್ಮಹಲ್ ಭಾರತೀಯ ಸಂಸ್ಕೃತಿಯಲ್ಲಿನ ಒಂದು ಕಪ್ಪು ಚುಕ್ಕೆ; ಅದನ್ನು ಕಟ್ಟಿದ್ದ ಶಹಜಹಾನ್ ತನ್ನ ತಂದೆಯನ್ನೇ ಜೈಲಿಗೆ ಹಾಕಿದ್ದ’ ಎಂದು ಸೋಮ್ ಹೇಳಿದ್ದಾರೆ.
ಮೀರತ್ ಜಿಲ್ಲೆಯ ಸಿಸೋಲಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಶಾಸಕ ಸೋಮ್ ತಾಜ್ ಮಹಲ್ ಕುರಿತಾಗಿ ತನ್ನ ಅಭಿಪ್ರಾಯಗಳನ್ನು ನಿಷ್ಠುರ ಮಾತುಗಳಲ್ಲಿ ಹೇಳಿದರು.
ಇದೇ ವೇಳೆ ಸೋಮ್, “ಮೊಹಮ್ಮದ ಅಲಿ ಜೌಹರ್ ವಿಶ್ವವಿದ್ಯಾಲಯವು ಭಯೋತ್ಪಾಕರ ಕಾರಸ್ಥಾನವಾಗಿದೆ’ ಎಂದು ಆರೋಪಿಸಿದರು.
ಸೋಮ್ ಅವರು ಈ ಹಿಂದೆಯೂ ಕೋಮು ಸಂಘರ್ಷಕ್ಕೆ ಕಾರಣವಾಗುವ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲ ಉರಿನಾಲಗೆಯ ಬಿಜೆಪಿ ಶಾಸಕ ಎಂದೇ ಪರಿಚಿತರಾಗಿದ್ದರು.
ತಾಜ್ ಮಹಲ್ ಮತ್ತು ಮೊಹಮ್ಮದ್ ಅಲಿ ಜೌಹರ್ ವಿವಿ ಕುರಿತಾದ ಸೋಮ್ ಅವರ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ದೂರ ಸರಿದಿದೆ.
“ಸೋಮ್ ಹೇಳಿರುವುದೆಲ್ಲ ಅವರ ವೈಯಕ್ತಿಕ ನೆಲೆಯಲ್ಲಿ; ಅದು ಬಿಜೆಪಿಯ ಅಭಿಪ್ರಾಯವಲ್ಲ’ ಎಂದು ಬಿಜೆಪಿ ವಕ್ತಾರ ಅನಿಲ್ ಸಿಂಗ್, ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ನೋಡಿ ಪ್ರತಿಕ್ರಿಯಿಸಿದ್ದಾರೆ.
ಹಾಗಿದ್ದರೂ ಈಚೆಗೆ ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಐತಿಹಾಸಿಕ ತಾಜ್ ಮಹಲ್ ಕಟ್ಟಡಕ್ಕೂ ಭಾರತೀಯ ಸಂಸ್ಕತಿ ಮತ್ತು ಪರಂಪರೆಗೂ ಯಾವುದೇ ಸಂಬಂಧ ಇಲ್ಲ’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….