ಆರೋಗ್ಯ

ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

764

ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ.

ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ.

ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ. ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಜೀವನಶೈಲಿ

    ನಿಮ್ಮ ‘ಬಾತ್ ರೂಂ’ ಸ್ವಚ್ಛವಾಗಿದ್ದರೆ ದೂರವಾಗುತ್ತೆ ನಿಮ್ಮ ಬಡತನ ..!ತಿಳಿಯಲು ಈ ಲೇಖನ ಓದಿ …

    ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.