ಆರೋಗ್ಯ

‘ಬೀಟ್‌ರೂಟ್‌’ನಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

962

ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್‌ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್‌ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್‌ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.

ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-

ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.

ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-

ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.

ಬೀಟ್ರೂಟ್ ಜ್ಯೂಸ್:-

ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ

ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-

ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.

ಬೀಟ್‍ರೂಟ್ ಫ್ರೈ:-

ಬೀಟ್‍ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್‍ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ

ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-

ಬೀಟ್‌ರೂಟ್‌ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್‌ರೂಟ್‌ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • ಆರೋಗ್ಯ

    ತಲೆನೋವಿನ ಸಮಸ್ಯೆಗೆ ಪರಿಹಾರ ಈಗ ಮನೆಯಲ್ಲಿಯೇ ಪಡೆಯಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….