ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

ಈ ಪಟ್ಟಣದ ಬಗ್ಗೆ ವಿವರಗಳಿಲ್ಲಿವೆ:-
ಅಲ್ಬಿನೆನ್ ಈ ಪಟ್ಟಣದ ಹೆಸರು. ಸಮುದ್ರ ಮಟ್ಟದಿಂದ 4265 ಅಡಿ ಎತ್ತರದಲ್ಲಿ ರಮಣೀಯ ಕಣಿವೆಯಲ್ಲಿದೆ. ಇದು ಪರ್ವತ ನಗರವಾಗಿದ್ದು, ತನ್ನದೇ ಆದ ಚರ್ಚ್ ಹೊಂದಿದೆ. ಇಲ್ಲಿ ಎಲ್ಲೆಲ್ಲಿಯೂ ಸಾಂಪ್ರದಾಯಿಕ ವಾಲೈಸ್ ವಾಸ್ತು ಸೌಂದರ್ಯ ರಾರಾಜಿಸುತ್ತಿದೆ.

ಈ ಪಟ್ಟಣವು ಪ್ರಶಾಂತ ವಾತಾವರಣ, ಅದ್ಭುತ ನೈಸರ್ಗಿಕ ದೃಶ್ಯಗಳು, ಶುದ್ಧ ಗಾಳಿ ಮತ್ತು ವರ್ಷದ ಹೆಚ್ಚಿನ ಸಮಯ ಹದವಾದ ಬಿಸಿಲಿನಿಂದ ಕೂಡಿದೆ. ಆದರೆ ಇಲ್ಲಿಯ ನಿವಾಸಿಗಳೆಲ್ಲ ವಾಸಕ್ಕಾಗಿ ದೊಡ್ಡ ನಗರಗಳಿಗೆ ತೆರಳುತ್ತಿರುವುದರಿಂದ ಇನ್ನು ಕೆಲವೇ ವರ್ಷಗಳಲ್ಲಿ ಇಲ್ಲಿ ಜನಸಂಖ್ಯೆಯಿಲ್ಲದೆ ಇಡೀ ಪಟ್ಟಣವೇ ಬಿಕೋ ಎನ್ನುವ ಬೆದರಿಕೆ ಸರಕಾರವನ್ನು ಕಾಡುತ್ತಿದೆ.

ಸದ್ಯ ಈ ಪಟ್ಟಣದಲ್ಲಿ ಕೇವಲ 240 ಜನರು ವಾಸವಾಗಿದ್ದಾರೆ. ಇವರ ಪೈಕಿ ಮಕ್ಕಳ ಸಂಖ್ಯೆ ಹೇಗೆ ಎಣಿಸಿದರೂ ಏಳನ್ನು ಮೀರುವುದಿಲ್ಲ. ಹೆಚ್ಚಿನ ಕುಟುಂಬಗಳೆಲ್ಲ ದೊಡ್ಡ ನಗರಗಳಿಗೆ ವಲಸೆ ಹೋದ ಬಳಿಕ ಈ ಊರಿನ ಶಾಲೆಯು ಬಾಗಿಲು ಹಾಕಿಕೊಂಡಿದ್ದರಿಂದ ಈ ಮಕ್ಕಳು ಬಸ್ನಲ್ಲಿ ಸಮೀಪದ ಪಟ್ಟಣದ ಶಾಲೆಗೆ ಹೋಗುತ್ತಾರೆ.

ಈ ಸುಂದರವಾದ ತಾಣದಲ್ಲಿ ವಾಸವಾಗಲು ಬರುವವರಿಗೆ 60,000 ಡಾ.ಗಳ ಕೊಡುಗೆಯನ್ನು ಸರಕಾರವು ಘೋಷಿಸಿದೆ. ಇದರಿಂದಾಗಿ ಅವರು ಇಲ್ಲಿ ತಮ್ಮದೇ ಆದ ಮನೆಗಳನ್ನು ಖರೀದಿಸಬಹುದಾಗಿದೆ. 45 ವರ್ಷದೊಳಗಿನ, ಎರಡು ಮಕ್ಕಳಿರುವ ದಂಪತಿಗಳಿಗೆ ಮಾತ್ರ ಈ ಕೊಡುಗೆ ಮುಕ್ತವಾಗಿದೆ.

ಅಂದ ಹಾಗೆ ಈ ಕೊಡುಗೆಯೊಂದಿಗೆ ಒಂದು ಷರತ್ತೂ ಇದೆ. 60,000 ಡಾ.ಗಳನ್ನು ಪಡೆದುಕೊಂಡು ಇಲ್ಲಿ ನೆಲೆಸುವ ದಂಪತಿಗಳು ಈ ಊರನ್ನು ತೊರೆಯಲು ನಿರ್ಧರಿಸಿದರೆ ಸರಕಾರಕ್ಕೆ ಅಷ್ಟೂ ಹಣವನ್ನು ಹಿಂದಿರುಗಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….