ರಾಜಕೀಯ

2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

99

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

ಮೋದಿ ಸರ್ಕಾರ 2014ರ ಏಪ್ರಿಲ್‌‌ನಿಂದ 2017ರ ಅಕ್ಟೋಬರ್‌ವರೆಗೆ ಪ್ರಚಾರಕ್ಕಾಗಿಯೇ ಬರೋಬ್ಬರಿ 37,54,06,23,616 ರೂಪಾಯಿ ವ್ಯಯಿಸಿದೆ. ವಿದ್ಯುನ್ಮಾನ, ಮುದ್ರಣ ಮತ್ತು ಇತರ ಸಾರ್ವಜನಿಕ ಪ್ರಚಾರದ ಜಾಹೀರಾತಿಗಾಗಿ ಇಷ್ಟು ಮೊತ್ತದ ಹಣ ವ್ಯಯ ಮಾಡಲಾಗಿದೆ ಎಂದು ಆರ್‌ಟಿಐ ಅಡಿ ಸಲ್ಲಿಸಿದ ಅರ್ಜಿಗೆ ಸರ್ಕಾರವೇ ಉತ್ತರಿಸಿದೆ.

ಗ್ರೇಟರ್‌ ನೋಯ್ಡಾ ಮೂಲದ ಸಾಮಾಜಿಕ ಕಾರ್ಯಕರ್ತ ರಾಮ್‌‌‌ವೀರ್‌ ತನ್ವರ್‌ ಎಂಬುವವರು ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಉತ್ತರಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸರ್ಕಾರ ಮೂರೂವರೆ ವರ್ಷದಲ್ಲಿ ವಿದ್ಯುನ್ಮಾನ, ರೇಡಿಯೋ, ಡಿಜಿಟಲ್‌ ಸಿನಿಮಾ, ಇಂಟರ್‌ನೆಟ್‌, ಎಸ್‌ಎಂಎಸ್‌‌ಗಳಿಗೆ 1,666 ಕೋಟಿ ರೂಪಾಯಿಗೂ ಅಧಿಕ ಹಣ ವೆಚ್ಚ ಮಾಡಿದೆ.

ಮುದ್ರಣ ಮಾಧ್ಯಮದಲ್ಲಿ ಪ್ರಚಾರಕ್ಕಾಗಿ 1,698 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವ್ಯಯಿಸಿದೆ ಎಂದು ಮಾಹಿತಿ ನೀಡಿದೆ.

ಜೊತೆಗೆ ಸಾರ್ವಜನಿಕ ಪೋಸ್ಟರ್‌‌ಗಳು, ಬುಕ್ಲೆಟ್‌ಗಳು, ಕ್ಯಾಲೆಂಡರ್‌‌ಗಳಿಗಾಗಿ 399 ಕೋಟಿ ರೂಪಾಯಿಗೂ ಅಧಿಕ ಹಣ ವೆಚ್ಚ ಮಾಡಲಾಗಿದೆ ಎಂದು ಆರ್‌ಐಟಿ ಅರ್ಜಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಉತ್ತರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

  • ಸುದ್ದಿ

    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

    ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…