ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತ ಲಿಖಿತ ಉತ್ತರ ನೀಡಿದ ವಸತಿ ಖಾತೆ ರಾಜ್ಯ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರು, 1908ರ ನೋಂದಣಿ ಕಾಯಿದೆಯ ನಿಬಂಧನೆಗಳಡಿ ಆಸ್ತಿ ನೋಂದಾಯಿಸಲು ಸಮ್ಮತಿಯೊಂದಿಗೆ ಆಧರ್ ಬಳಸಿಕೊಳ್ಳುವ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಲಾಗಿದೆ ಎಂದರು.

ಬೇನಾಮಿ ಆಸ್ತಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸ್ಥಿರಾಸ್ತಿಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂಬ ವದಂತಿ ಕೆಲವು ದಿನಗಳಿಂದ ದಟ್ಟವಾಗಿತ್ತು.

ಈ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ‘ಆಧಾರ್ ಸಂಖ್ಯೆಯ ಮೂಲಕ ಬೇನಾಮಿ ಆಸ್ತಿ ಪತ್ತೆ ಮಾಡಲಾಗುವುದು ಎಂದು ಹೇಳಿದ್ದರು. ಹೀಗಾಗಿ ಆಸ್ತಿ ವ್ಯವಹಾರಕ್ಕೆ ಆಧಾರ್ ಕಡ್ಡಾಯಗೊಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿದ್ದವು.
‘ಆಸ್ತಿ ವಹಿವಾಟಿಗೆ ಆಧಾರ್ ಸಂಪರ್ಕ ಕಲ್ಪಿಸುವ ಯೋಚನೆಯೇ ಸರ್ಕಾರಕ್ಕೆ ಇಲ್ಲ ಎಂದ ಮೇಲೆ ಗಡುವು ವಿಸ್ತರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವದಂತಿ ಹರಡಿದ್ದು ಹೇಗೆ..?
ಬ್ಯಾಂಕ್ ಖಾತೆ, ಮೊಬೈಲ್ ಸಂಖ್ಯೆಗಳ ರೀತಿಯಲ್ಲಿಯೇ ಆಸ್ತಿ ನೋಂದಣಿಗೂ ಆಧಾರ್ ಸಂಪರ್ಕ ಕಡ್ಡಾಯಗೊಳಿಸುವುದು ನಿಜಕ್ಕೂ ಒಳ್ಳೆಯ ಕಲ್ಪನೆ’ ಎಂದು ಸಚಿವ ಹರ್‌ದೀಪ್ ಸಿಂಗ್ ಪುರಿ ನವೆಂಬರ್‌ನಲ್ಲಿ ಹೇಳಿದ್ದರು.
ಆಧಾರ್ ಜೋಡಣೆಯೊಂದಿಗೆ ಬೇನಾಮಿ ಆಸ್ತಿಗಳಿಗೆ ಕಡಿವಾಣ ಬೀಳಲಿದ್ದು, ಭೂ ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿತ್ತು.
ಈ ಸುದ್ದಿ ಭೂಗಳ್ಳರಲ್ಲಿ ನಡುಕ ಹುಟ್ಟಿಸಿತ್ತು.ಭೂ ವಹಿವಾಟುಗಳ ಅಕ್ರಮಕ್ಕೆ ತೆರೆ ಬೀಳಲಿದೆ ಎಂಬ ಆಶಾಭಾವನೆಯನ್ನು ಜನಸಾಮಾನ್ಯರಲ್ಲಿ ಹುಟ್ಟುಹಾಕಿತ್ತು.
ಇಬ್ಬರ ನಡುವಿನ ಆಸ್ತಿ ವ್ಯವಹಾರದ ಮೇಲೆ ನಿಗಾ ಇಡಬಹುದು ಮತ್ತು ಮತ್ತೊಬ್ಬರ ಹೆಸರಿನಲ್ಲಿ ಆಸ್ತಿ ನೋಂದಣಿ ತಪ್ಪಿಸಬಹುದು ಎಂದು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಯೊಬ್ಬರು ಈ ಹಿಂದೆ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.