ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಪಂಚಾಯಿತಿಯ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಅದನ್ನು ಸಮರ್ಥಿಸಿಕೊಂಡಿರುವ ಪಂಚಾಯಿತಿಯವರು, ಹುಡುಗಿಯರ ವಿರುದ್ದದ ಅಪರಾಧ ಪ್ರಕರಣಗಳಿಗೆ ತಡೆ ಹಾಕಲು ಹಾಗೂ ಪ್ರೇಮ ಪ್ರಕರಣಗಳ ಕಡಿವಾಣಕ್ಕೆ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದಾರೆ.
ಪಂಚಾಯಿತಿಯ ಈ ತೀರ್ಮಾನ ಜಿಲ್ಲಾಡಳಿತದ ಗಮನಕ್ಕೂ ಬಂದಿದ್ದು, ಅಧಿಕೃತವಾಗಿ ದೂರು ಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್‌ಟೈನ್‌ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್‍ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…