ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.
ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.
ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.
ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.
ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.