ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು.
ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ ಹಾಕೋಕೆ ಆಗೋದಿಲ್ಲ. ಫಿಲ್ಮ್ ನೋಡೋರು ನೋಡ್ಬಹುದು. ಇಲ್ಲಾ ಎದ್ದು ಮನೆಗೆ ಹೋಗ್ಬಹುದು ಅಂತ ಧಿಮಾಕು ತೋರಿದ್ದಾರೆ.
ಇದ್ರಿಂದ ಕೋಪಗೊಂಡ ಪ್ರೇಕ್ಷಕರು ಮಾಲ್ನಲ್ಲಿ ಗಲಾಟೆ ಮಾಡಿದ್ದಾರೆ. ಅಲ್ಲದೆ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಗಲಾಟೆ ಜೋರಾಗುತ್ತಿದ್ದಂತೆ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಮಾಲ್ನವರು ಟಿಕೆಟ್ ದುಡ್ಡನ್ನ ವಾಪಸ್ ನೀಡಿದ್ದಾರೆ. ಎಸಿ ಯಲ್ಲಿ ಸಮಸ್ಯೆ ಇದೆ ಅಂತ ಕಾರಣ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಭಾರೀ ಸಕ್ಸಸ್ಫುಲ್ ಪ್ರದರ್ಶನ ಕಾಣ್ತಿರೋ ರಾಜಕುಮಾರ ಚಿತ್ರವನ್ನ ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಎಸಿ ಚೆನ್ನಾಗಿದ್ದರೂ ಹಾಕದ ಮಾಲ್ನವರಿಗೆ ಕನ್ನಡ ಚಿತ್ರ, ಕನ್ನಡಿಗರಿಗಿಂತ ಎಸಿಯೇ ಹೆಚ್ಚಾಗಿ ಹೋಯ್ತಾ ಅಂತ ಪ್ರೇಕ್ಷಕರು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…