ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ರಾಜ್ಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದರು.
ಇದಕ್ಕಾಗಿ, ಎಸ್ಸಿಪಿ ಮತ್ತು ಟಿಎಸ್ಪಿ ಹಣದಲ್ಲಿ 105 ಕೋಟಿ ರೂ. ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಮುನ್ನ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದ ಬಸ್ ಪಾಸ್ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಶೇ.50 ರಷ್ಟು, ಅಂಬೇಡ್ಕರ್ ಹಾಗೂ ವಾಲ್ಮೀಕಿ ನಿಗಮದಿಂದ ಶೇ.25 ಹಾಗೂ ವಿದ್ಯಾರ್ಥಿಗಳು ಶೇ.25 ರಷ್ಟು ಭರಿಸುತ್ತಿದ್ದರು.
ಆದರೆ, ಪ್ರಸಕ್ತ ಸಾಲಿನಿಂದ ಸಂಪೂರ್ಣವಾಗಿ ಉಚಿತವಾಗಿ ಬಸ್ ಪಾಸ್ ನೀಡಬೇಕು. ಎಸ್ಸಿಪಿ, ಟಿಎಸ್ಪಿ ಹಣದಲ್ಲಿ ವೆಚ್ಚ ಭರಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಗಳನ್ನು ಸಕಾಲದಲ್ಲಿ ಜಾರಿಗೊಳಿಸಿ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು.
2015-16 ನೇ ಸಾಲಿನ ಉಳಿಕೆ 751 ಕೋಟಿ ರೂ. ಸೇರಿದಂತೆ ಪ್ರಸಕ್ತ ಸಾಲಿನಲ್ಲಿ 27,703 ಕೋಟಿ ರೂ. ಅನುದಾನ ಲಭ್ಯವಿದೆ. ಅದೇ ರೀತಿ 2016-17 ನೇ ಸಾಲಿನಲ್ಲಿ 1,782 ಕೋಟಿ ರೂ. ವೆಚ್ಚವಾಗಿಲ್ಲ.
ಈಗಾಗಲೇ ಕ್ರಿಯಾ ಯೋಜನೆ ಸಿದ್ಧಗೊಂಡಿರುವ ಎಲ್ಲ ಯೋಜನೆಗಳನ್ನು ಮುಂದಿನ ವರ್ಷದ ಮಾರ್ಚ್ ಒಳಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಿ ಶೇ.100ಕ್ಕೆ 100 ರಷ್ಟು ಸಾಧನೆ ಮಾಡಲೇಬೇಕು ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.