ಗ್ಯಾಜೆಟ್

ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

883

ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್  ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

ಜಾತಿ, ಧರ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವವರು ತಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಸೇರಬಹದು ಎಂದು ಸಮತಿ ಪ್ರಕಟಿಸಿದೆ. ಹಣ ಸಲ್ಲಿಸಿ ವಿವಾಹ ವೆಬ್ ಸೈಟ್ ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ಪದ್ದತಿಯನ್ನು ಸಮಿತಿ ಕಂಡು ಹಿಡಿದಿದೆ.

ಹಣ ಸಲ್ಲಿಸಿ ವಿವಾಹ ವೆಬ್‌ಸೈಟ್‌ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಯುವತಿ, ಯುವಕರು ಸಂಪ್ರದಾಯಕ್ಕೆ ಗುಡ್ ಬೈ ಹೇಳಿ ಆಧುನಿಕ ಪದ್ಧತಿಯಲ್ಲಿ ವಾಟ್ಸಾಪ್ ಗ್ರೂಪ್ ಮೂಲಕ ನಿಮಗೆ ಇಷ್ಟವಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದಿದೆ ಸಮಿತಿ.

ನಿಮಗೆ ಬಾಳ ಸಂಗಾತಿ ಹೇಗಿರಬೇಕು ನೀವೇ ಆಯ್ಕೆ ಮಾಡಿಕೊಳ್ಳಬಹುದು. ಈ ವಿವಾಹ ಗ್ರೂಪ್ ಅಡ್ಮಿನ್ 45 ದಿನಗಳ ಕಾಲ ಪ್ರತಿನಿತ್ಯ ಸದಸ್ಯರಿಗೆ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಉತ್ತರಿಸಬೇಕು. 50 ದಿನಗಳ ಕಾಲ ಮಾತ್ರ ಈ ಗ್ರೂಪ್ ಚಾಲ್ತಿಯಲ್ಲಿರುತ್ತದೆ.

18 ವರ್ಷಕ್ಕಿಂತಲೂ ಮೇಲ್ಪಟ್ಟವರು ಜಾತಿ, ಧರ್ಮ, ಭಾಷೆ, ಪ್ರದೇಶಕ್ಕೆ ಅತೀತವಾಗಿ ಈ ವಿವಾಹ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರಬಹುದು ಎಂದಿದೆ ಸಮಿತಿ. ಕಳೆದ ಕೆಲ ವರ್ಷಗಳಿಂದ ಈ ಸಮಿತಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಕ್ಕೂ ಅಡಿಯಿಟ್ಟಿದ್ದು ವಾಟ್ಸಾಪ್ ಗ್ರೂಪ್ ಸೃಷ್ಟಿಸಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಸುದ್ದಿ

    ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

    ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ….