ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸಿ, ಬಯೋಮೆಟ್ರಿಕ್ ಪದ್ಧತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗುತ್ತಿದೆ ಎಂದರು. ಸಾರ್ವಜನಿಕರು ಪಡಿತರ ಚೀಟಿಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಸ್ಪೀಡ್ ಪೋಸ್ಟ್ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ವಿವರಿಸಿದರು. ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಬದಲಾಗಿ ಆದ್ಯತಾ ಮತ್ತು ಆದ್ಯತಾ ರಹಿತ ಕುಟುಂಬಗಳೆಂದು ಗುರ್ತಿಸಲಾಗಿದ್ದು, 1.20 ಲಕ್ಷ ರೂ. ಆದಾಯ ಮಿತಿ ಹೊಂದಿರು ವವರನ್ನು ಆದ್ಯತಾ ಕುಟುಂಬವೆಂದು, ಉಳಿದಂತೆ ಆದ್ಯತಾ ರಹಿತ ಕುಟುಂಬ ಎಂದು ಗುರುತಿಸಲಾಗಿದೆ ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಲ್ಲಿಯೂ ಬಯೋಮೆಟ್ರಿಕ್ ಅಳವಡಿಸಲಾಗುತ್ತಿದೆ. ಇದರಿಂದ ಗೋದಾ ಮುನಿಂದ ನ್ಯಾಯಬೆಲೆ ಅಂಗಡಿಗಳಿಗೆ ಎಷ್ಟು ಆಹಾರ ಪೂರೈಕೆಯಾಗಿದೆ. ನ್ಯಾಯಬೆಲೆ ಅಂಗಡಿಗಳಿಂದ ಎಷ್ಟರ ಮಟ್ಟಿಗೆ ಆಹಾರ ವಿತರಣೆಯಾಗಿದೆ ಎಂಬ ಮಾಹಿತಿ ದೊರೆಯಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಅಭಿಪ್ರಾಯ ಪಟ್ಟರು.

ರಾಜ್ಯದಲ್ಲಿ ಹತ್ತೂವರೆ ಲಕ್ಷ ಬೋಗಸ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ನಕಲಿ ಕಾರ್ಡ್‌ಗಳಿಗೆ
ಅವಕಾಶವಿರುವುದಿಲ್ಲ ಎಂದರು. ಆದರೂ ಬೋಗಸ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ನೀಡಿದರೆ ಅಂತವರಿಗೆ 4೦೦ ರೂ., ಹಾಗೆಯೇ ಕಾಳಸಂತೆ ಆಹಾರ ಪತ್ತೆ ಹಚ್ಚುವವರಿಗೆ ಬಹುಮಾನ ನೀಡಲಾಗುವುದು ಎಂದು ಸಚಿವರು ನುಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸೌಲಭ್ಯಗಳು ಆದ್ಯತಾ ಹಾಗೂ ಆದ್ಯತಾ ರಹಿತ ಕುಟುಂಬಗಳಿಗೆ ತಲುಪಬೇಕು ಎಂದರು. ಯಾವುದೇ ರೀತಿಯ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳಲಾಗುವುದು.ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿದರೆ ಒಂದು ವಾರದಲ್ಲಿ ಪಡಿತರ ಚೀಟಿ ನೀಡಬೇಕು. ಈಗಾಗಲೇ ಈ ಪ್ರಕ್ರಿಯೆಯು ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಆರಂಭಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಪಡಿತರ ಚೀಟಿಗೆ ಆಧಾರ್ ಜೋಡಣಾ ಕಾರ್ಯವು ನಡೆದಿದೆ. ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು. ಹಾಗೆಯೇ ಸಿರಿಧಾನ್ಯ ಬೆಳೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತಿದೆ. ಬೇಡಿಕೆ ಇರುವ ಕಡೆ ರಾಗಿ ಮತ್ತು ಜೋಳವನ್ನು ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಅವರ ಅನಿಲಭಾಗ್ಯ ಯೋಜನೆಯಡಿ ಫಲಾನುಭವಿಗಳ ಪಟ್ಟಿ ಪಡೆಯ ಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕಾರ್ಮಿಕರಿಗೆ ಈ ಸೌಲಭ್ಯ
ನೀಡಲಾಗುತ್ತದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…