ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ.
ದಿನದಿಂದ ದಿನಕ್ಕೆ ಮಾನವನ ಜೀವನದ ಶೈಲಿಗಳು, ಮಾನವನ ವಿಕಾಸವೂ ಉನ್ನತೀಕರಣವಾಗಿ ಪ್ರತಿಯೊಬ್ಬರೂ ಜೀವನದ ಮೌಲ್ಯಗಳನ್ನು ತಿಳಿದುಕೊಂಡು, ತಂತ್ರಜ್ಞಾನದಿಂದ ಜಗತ್ತಿನ ಆಗುಹೋಗುಗಳನ್ನು ಕ್ಷಣಮಾತ್ರದಲ್ಲಿ ತಿಳಿದುಕೊಳ್ಳುವ ಇಂತಹ ಸಂದರ್ಭದಲ್ಲಿ ಜೈನ ಧರ್ಮಗುರು ಬಾಹುಬಲಿಯವರು 9ನೇ ಶತಮಾನದಲ್ಲಿ ದಿಗಂಬರರಾಗಿದ್ದರು ಎನ್ನುವ ಕಾರಣದಿಂದ ಅಲ್ಲಿಂದ ಇಲ್ಲಿಯವರೆಗೆ ಧರ್ಮಗುರು ಬಾಹುಬಲಿಯವರನ್ನು ಹಾಗೆಯೇ ದಿಗಂಬರರಾಗಿ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಇದು ಮೌಢ್ಯತೆಗೆ ಹಿಡಿದ ಕನ್ನಡಿಯಾಗಿದೆ.
ಆಗಿನ ಸಂದರ್ಭದಲ್ಲಿ ಧರ್ಮಗುರು ಬಾಹುಬಲಿಯವರು ತೆಗೆದುಕೊಂಡಂತ ನಿರ್ಧಾರವು ಅವರಿಗೆ ಸರಿ ಅನಿಸಿರಬಹುದು. ಆದ್ರೆ ಅಂದಿನಿಂದ ಇಂದಿನವರೆಗೆ ಮಾನವನ ವಿಕಾಸದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಲ್ಲದೇ ಮಾನವನ ಪ್ರಗತಿಯು ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಾ ಸಾಗಿದೆ.
ಹೀಗಾಗಿ ದಿಗಂಬರರಾಗಿರುವ ಬಾಹುಬಲಿಯನ್ನು ನೋಡೋದಕ್ಕೆ ಅಸಹ್ಯ ಅನಿಸುತ್ತದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ನವರು ಇದರ ಬಗ್ಗೆ ಗಮನ ಹರಿಸಿ ಬಟ್ಟೆ ಹಾಕಲಿ. ಕಾಲ ಈಗ ಬದಲಾಗಿದೆ, ಬಾಹುಬಲಿನಾ ನೋಡೋಕೆ ಕಷ್ಟವಾಗಲಿದೆ.
ಇದ್ರಿಂದ ಧಾರ್ಮಿಕ ನಂಬಿಕೆಯ ವಿಚಾರ ಬರೋದಿಲ್ಲ. ಕನಿಷ್ಠ ಗೊಮಟೇಶ್ವರನ ಮಾನವನ್ನು ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಡ್ರಗ್ಸ್, ಆಲ್ಕೋಹಾಲ್‌ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್‌ಫೋನ್‌ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್‌ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್‌ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್‌ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.