ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಪ್ರಮುಖ ಬಸ್ ನಿಲ್ದಾಣಗಳು ಮತ್ತು 350 ಹವಾನಿಯಂತ್ರಿತ ವೋಲ್ವೊ ಬಸ್ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಪ್ರಯಾಣಿಕರನ್ನು ತನ್ನತ್ತ ಆಕರ್ಷಿಸಲು ಕಸರತ್ತು ನಡೆಸುತ್ತಿದೆ.
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ಉಚಿತ ಅಂತರ್ಜಾಲ ಸೇವೆ ಮತ್ತು ಆಕರ್ಷಕ ಪ್ರಯಾಣ ದರಕ್ಕೆ ಮಾರು ಹೋಗಿರುವ ಐಟಿ-ಬಿಟಿ ಉದ್ಯೋಗಿಗಳು ವೋಲ್ವೊ ಬಸ್ಗಳನ್ನು ಬಿಟ್ಟು, ಟ್ಯಾಕ್ಸಿ ಏರುತ್ತಿದ್ದಾರೆ. ಪರಿಣಾಮ, ವೋಲ್ವೊ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಸಂಸ್ಥೆಯು ನಷ್ಟ ಅನುಭವಿಸುವಂತಾಗಿದೆ.
350 ಬಸ್ಗಳಲ್ಲಿ ವೈಫೈ ಸೇವೆ:-
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿರುವ 75 ವಾಯುವಜ್ರ ಬಸ್ಗಳೂ ಸೇರಿದಂತೆ ಐಟಿ ಕಾರಿಡಾರ್ಗಳಿಗೆ ಸಂಚರಿಸುವ 350 ವೋಲ್ವೊ ಬಸ್ಗಳಲ್ಲಿ ವೈಫೈ ಸೇವೆ ಒದಗಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 200 ಬಸ್ಗಳಲ್ಲಿ ವೈಫೈ ಸೌಲಭ್ಯ ಅಳವಡಿಸಲು ಅನುಮತಿ ನೀಡಲಾಗಿದೆ.
12 ನಿಲ್ದಾಣಗಳಲ್ಲಿ ವೈಫೈ ಜಾಲ:-
ನಗರದ ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ಶಾಂತಿನಗರ, ಕೆಂಗೇರಿ, ವೈಟ್ಫೀಲ್ಡ್, ಬನಶಂಕರಿ, ಜಯನಗರ, ಬನ್ನೇರುಘಟ್ಟ, ವಿಜಯನಗರ, ದೊಮ್ಮಲೂರು, ಯಲಹಂಕ, ಯಶವಂತಪುರ ನಿಲ್ದಾಣಗಳು ವೈಫೈ ಸೇವಾ ಜಾಲವನ್ನು ಹೊಂದಿರಲಿವೆ. ವೈಫೈ ಅಳವಡಿಕೆಗೆ ಖಾಸಗಿ ಸಂಸ್ಥೆಯೊಂದಕ್ಕೆ ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಮುಂದಿನ 15-20 ದಿನಗಳಲ್ಲಿ ಪ್ರಯಾಣಿಕರಿಗೆ ವೈಫೈ ಸೌಲಭ್ಯ ಸಿಗಲಿದೆ.
30 ಎಂಬಿ ಬಳಕೆಗೆ ಅವಕಾಶ:-
ವೋಲ್ವೊ ಬಸ್ಗಳು ಮತ್ತು ನಿಲ್ದಾಣಗಳಲ್ಲಿ ಲಭಿಸುವ ವೈಫೈ ಮೂಲಕ ಅಂತರ್ಜಾಲದ ಸಂಪರ್ಕ ಪಡೆದು, 30 ಎಂಬಿ ಯಷ್ಟು ಡಾಟಾ ಬಳಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಸಮಯದ ಮಿತಿ ಇರುವುದಿಲ್ಲ. 30 ಎಂಬಿ ಮಿತಿ ದಾಟಿದಾಕ್ಷಣ ಸಂಪರ್ಕ ಕಡಿತಗೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.