ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ.
ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ ಒದ್ದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು, ಮಹಿಳೆಯನ್ನು ಹೊರಸಿನ ಸಮೇತ ಎತ್ತಿಕೊಂಡು, ರಸ್ತೆವರೆಗೆ ಹೆಗಲ ಮೇಲೆ ಹೊತ್ತೊಯ್ದಿದ್ದಾರೆ. ಮಹಿಳೆಯ ಮನೆಯಿದ್ದ ಕಾಡಿನ ಪ್ರದೇಶ ಪಡೇಡಾದಿಂದ ಸುಮಾರು 6ಕಿ.ಮೀ. ದೂರದಲ್ಲಿ ರಸ್ತೆ ಇದ್ದು, ಅಲ್ಲಿಯವರೆಗೂ ಯೋಧರು ಮಹಿಳೆಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.
ರಸ್ತೆವರೆಗೆ ಮಹಿಳೆಯನ್ನು ಹೊತ್ತುಕೊಂಡು ಹೋಗಿ, ನಂತರ ವಾಹನದ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಧರ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.