ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ ಇತ್ಯರ್ಥ ಸಾಧ್ಯ| ವಿಕೋಪ ಸಂದರ್ಭ ಪರಿಹಾರ ಹಂಚಿಕೆಯೂ ಸರಳ.
ಈ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಹಾಗೂ ಕಂದಾಯ ನ್ಯಾಯಾಲಯ ವ್ಯವಸ್ಥೆ ಸಂಖ್ಯೆಯನ್ನು ಜೋಡಣೆಗೊಳಿಸುವುದರಿಂದ, ಭೂ ಮಾಲಿಕ, ವಿಳಾಸ, ವಿಸ್ತೀರ್ಣ ಸೇರಿ ಜಮೀನಿನ ಎಲ್ಲಾ ಮಾಹಿತಿಗಳು ಬೆರಳ ತುದಿಯಲ್ಲೇ ಲಭ್ಯವಾಗಲಿದೆ. ಈ ಬಗ್ಗೆ ಕೇಂದ್ರ ಗ್ರಾಮೀಣಾಭಿವೃದ್ದಿ ಇಲಾಖೆ ಈಗಾಗಲೇ ಕೆಲಸ ಆರಂಭಿಸಿದೆ. ಸರ್ಕಾರದ ಈ ಯೋಜನೆಯಿಂದ ಭೂ ದಾಖಲೆಗಳು ಸಂಪೂರ್ಣವಾಗಿ ಡಿಜಿಟಲೀಕರಣಗೊಳ್ಳುವುದರಿಂದ ಭೂ ಮಾಲಿಕರ ಮಾಹಿತಿ ಪತ್ತೆ ಹಚ್ಚುವುದು ಸುಲಭವಾಗಲಿದೆ. ಜತೆಗೆ ಭೂ ವ್ಯವಹಾರ, ಆಸ್ತಿ ತೆರಿಗೆ ಸಂಗ್ರಹ, ಸಾರ್ವಜನಿಕ ಯೋಜನೆಗಳಿಗೆ ಭೂ ಸ್ವಾಧೀನ, ಆಸ್ತಿ ತೆರಿಗೆ ಸಮಸ್ಯೆಗಳ ಪರಿಹಾರ ಹಾಗೂ ಪ್ರಾಕೃತಿಕ ವಿಕೋಪದ ವೇಳೆ ಪರಿಹಾರ ಹಂಚಿಕೆಯೂ ಸರಳವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವಿಶಿಷ್ಟಸಂಖ್ಯೆ ಮೂಲಕ ಜಮೀನಿನ ಹಿಂದಿನ ಮಾಲೀಕರ ಮಾಹಿತಿಯೂ ದೊರೆಯಲಿದ್ದು, ಭೂ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿದೆ. ಮಾಲಿಕತ್ವ ವಿವಾದದಿಂದ ಹೂಡಿಕೆಗೆ ಹಿಂಜರಿಯುವ ಸಮಸ್ಯೆ ಕೂಡ ಇದರಿಂದ ಪರಿಹಾರವಾಗಲಿದ್ದು, ಹೆಚ್ಚಿನ ವಿದೇಶಿ ಬಂಡವಾಳ ಆಕರ್ಷಿಸಲಿದೆ. ಅಲ್ಲದೇ ಬೇನಾಮಿ ಆಸ್ತಿಗಳ ಬಗ್ಗೆಯೂ ಸರ್ಕಾರಕ್ಕೆ ಸುಲಭವಾಗಿ ಮಾಹಿತಿ ಲಭ್ಯವಾಗಲಿದೆ. ಜತೆಗೆ ಜಮೀನು ಅಡವಿಟ್ಟು ಸಾಲ ಪಡೆಯಲು ರೈತರ ಬವಣೆಯನ್ನು ಇದು ಕಡಿಮೆ ಮಾಡಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ದೇಶದೆಲ್ಲೆಡೆ ಕಳೆದ 20 ವರ್ಷಗಳಿಂದ ಭೂ ವಿವಾದ ಸಂಬಂಧ ಎರಡನೇ ಮೂರರಷ್ಟುಪ್ರಕರಣಗಳು ನ್ಯಾಯಾಲಯದಲ್ಲಿ ಕೊಳೆಯುತ್ತಿದ್ದು, ಈ ಯೋಜನೆಯಿಂದ ಅವುಗಳ ಶೀಘ್ರ ವಿಲೆ ಕೂಡ ನಡೆಯಲಿದೆ. ಸರ್ಕಾರ ಈಗಾಗಲೇ ಡಿಜಿಟಲ್ ಇಂಡಿಯಾ ಯೋಜನೆಯಡಿ ಭೂ ದಾಖಲೆಗಳ ಡಿಜಿಟಲೀಕರಣ ಪ್ರಕ್ರೀಯೆ ಆರಂಭಿಸಿದ್ದರೂ, ಅದಕ್ಕೆ ಮಿಶ್ರ ಪ್ರಕ್ರೀಯೆ ವ್ಯಕ್ತವಾಗಿತ್ತು. ಇದೀಗ ಈ ಹೊಸ ಯೋಜನೆಯಿಂದ ಭೂ ವ್ಯವಹಾರ ಸಂಬಂಧ ಎಲ್ಲಾ ಪ್ರಕ್ರೀಯೆಗಳು ಸರಳವಾಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…