ಸುದ್ದಿ

‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

94

ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ.

ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ ಕನಸು ಕಂಡು, ದೇಶಕ್ಕೆ ಅದ್ಭುತ ಕೊಡುಗೆಗಳನ್ನು ನೀಡಿ ಎಲ್ಲರ ಪ್ರೀತಿ ಗಳಿಸಿದ್ದರು. ಅವರ ಆದರ್ಶ ಜೀವನ ಸದಾ ದೇಶವಾಸಿಗಳಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜಯಂತೋತ್ಸವದಂದು ಇಡೀ ಭಾರತವೇ ಅವರಿಗೆ ನಮಿಸುತ್ತಿದೆ ಎಂದು ಮೋದಿ ಹಾಡಿ ಹೊಗಳಿದ್ದಾರೆ.

ಕಲಾಂ ಅವರಿಗೆ ವಿದ್ಯಾರ್ಥಿಗಳೆಂದರೆ ವಿಶೇಷ ಕಾಳಜಿ, ಅಕ್ಕರೆ. ಹೀಗಾಗಿ ಭವ್ಯ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳೊಂದಿಗೆ ಅವರು ಹೆಚ್ಚಿನ ಸಮಯ ಕಳೆಯುತ್ತಿದ್ದರು. 2015ರ ಜುಲೈ 27 ರಂದು ಶಿಲ್ಲಾಂಗ್ ಐಐಎಂನಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕಲಾಂ ಎಲ್ಲರನ್ನು ಅಗಲಿದರು.

ವಿದ್ಯಾರ್ಥಿಗಳ ಮೇಲಿನ ಕಲಾಂ ಅವರ ಪ್ರೀತಿ, ಕಾಳಾಜಿ ಇಡೀ ವಿಶ್ವದ ಗಮನ ಸೆಳೆದಿತ್ತು. ದೇಶ ಕಂಡ ಒಂದೊಳ್ಳೆ ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ ಉನ್ನತ ಜವಾಬ್ದಾರಿಯನ್ನು ನಿಭಾಯಿಸಿ ಮೆಚ್ಚುಗೆ ಪಡೆದಿದ್ದರೂ, ತಮ್ಮನ್ನು ತಾವು ಮೊದಲು ಶಿಕ್ಷಕನಾಗಿ ಗುರುತಿಸಿಕೊಳ್ಳಲು ಅವರು ಬಯಸುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಬೇಕೆಂದು 2015ರಲ್ಲಿ ವಿಶ್ವಸಂಸ್ಥೆ ಕರೆ ನೀಡಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ