ಸುದ್ದಿ

ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

45

ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ.

ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು.

ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.

ಬಸ್ ಕಂದಕಕ್ಕೆ ಉರುಳಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತಲುಪಿದ ಪೊಲೀಸರು ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಬಸ್ ಕೆಳಗೆ ಇನ್ನು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಸಹ ರಕ್ಷಣಾ ಕಾರ್ಯಕ್ಕೆ ಪೊಲೀಸರಿಗೆ ಸಾಥ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.