ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ ಸಂಭ್ರಮದಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿದೆ. ಲಖಿಸರೈನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ನುಗ್ಗಿದ್ದು, 8 ಮಂದಿಯನ್ನು ಬಲಿಪಡೆದಿದೆ

ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ 8 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಲಖಿಸರೈನ ಸರ್ದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೂವರು ವರನ ಕಡೆಯವರು ಮತ್ತು ಐವರು ವಧುವಿನ ಕಡೆಯವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಮೃತಪಟ್ಟವರನ್ನು ಮಂಜೀತ್ ಕುಮಾರ್, ನಕಾತ್ ಮಾಂಜಿ, ಮುಸ್ಕನ್ ಕುಮಾರಿ, ಉಮೇಶ್ ಮಾಂಜಿ, ರಾಜೀವ್ ಮಾಂಜಿ, ಧನರಾಜ್ ಮಾಂಜಿ, ಶಂಭು ಮಾಂಜಿ ಮತ್ತು ಗೋರ್ ಮಾಂಜಿ ಎಂದು ಗುರುತಿಸಲಾಗಿದೆ. ಹಾಗೆಯೇ ಕರುಕು ಮಾಂಜಿ, ಸಾನು ಮಾಂಜಿ, ರಿತಿಕ್ ಮಾಂಜಿ, ಕಾರ್ಪುರಿ ಮಾಂಜಿ, ಮಾಟ್ರು ಮಾಂಜಿ ಸೇರಿದಂತೆ ಗಾಯಗೊಂಡವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಎಸ್‍ಪಿ ಮನೀಶ್ ಕುಮಾರ್, ಎಸ್‍ಡಿಎಂ ಮುರ್ಲಿ ಪ್ರಸಾದ್ ಸಿಂಗ್ ಹಾಗೂ ಇತರೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.