ಸುದ್ದಿ

ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

By admin

July 13, 2019

ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ.

ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ.

ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲಿಸ್ ನವರು  ವಿಚಾರಣೆ  ನಡೆಸುತ್ತಿದ್ದಾರೆ.