ಸುದ್ದಿ

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

39

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರು ರಸ್ತೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾಗ ವೇಗವಾಗಿ ಬಂದ ಅಪರಿಚಿತ ವಾಹನ ಇವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ನಾಲ್ವರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಆರಂಭಿಸಿದ್ದಾರೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ