ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ.
ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ ಬಿಎಸ್ಎನ್ಎಲ್ ಹೊರತುಪಡಿಸಿ ಬೇರೆ ಕಂಪೆನಿಗಳು ಪೈಪೋಟಿಯಲ್ಲಿಲ್ಲ.
ನಷ್ಟವನ್ನು ಸರಿದೂಗಿಸಲು ದರ ಏರಿಕೆಯ ಅನಿವಾರ್ಯತೆಗೆ ಈ ಕಂಪೆನಿಗಳು ಮುಂದಾಗಿವೆ. ವಿವಿಧ ಸೇವೆಗಳನ್ನು ಉಚಿತವಾಗಿ ನೀಡುತ್ತಿದ್ದ ಕಂಪೆನಿಗಳು ಅವುಗಳಿಗೆ ಶುಲ್ಕ ವಿಧಿಸಲು ಮುಂದಾಗಿವೆ ಹಾಗೂ ಇತರೆ ಸೇವಾ ಶುಲ್ಕಗಳ ಮೇಲೆಯೂ ಹೆಚ್ಚುವರಿ ಹೊರೆ ನೀಡಿವೆ.
ಡಿಸೆಂಬರ್ 1ರಿಂದ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪೆನಿಗಳ ಸೇವೆಗಳ ದರ ಏರಿಕೆಯಾಗಲಿದೆ. ಪೋಸ್ಟ್ ಪೇಯ್ಡ್ ಮತ್ತು ಪ್ರೀಪೇಯ್ಡ್ ಎರಡೂ ಗ್ರಾಹಕರಿಗೆ ಈ ದರ ಹೆಚ್ಚಳದ ಬಿಸಿ ತಟ್ಟಲಿದೆ. ಸೇವೆಗಳ ಮೇಲೆ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡುವುದಾಗಿ ಸಂಸ್ಥೆಗಳು ತಿಳಿಸಿವೆ. ಜಿಯೋ ಇತರೆ ಸೇವಾದಾರರ ಗ್ರಾಹಕರಿಗೆ ಮಾಡುವ ಕರೆಗಳ ಮೇಲೆ ನಿಮಿಷಕ್ಕೆ ಆರು ಪೈಸೆಗಳ ದರ ವಿಧಿಸುವ ನಿರ್ಧಾರವನ್ನು ಇತ್ತೀಚೆಗೆ ತೆಗೆದುಕೊಂಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಮಕ್ಕಳು ಮೊಬೈಲ್ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್ಫೋನ್ ಮತ್ತು ಟ್ಯಾಬ್ಗಳಿಗಾಗಿ 30 ಗೇಮ್ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್ ಓಕ್ಪರಾ ಜ್ಯೂ. ಲಾಗೋಸ್ ನಿವಾಸಿಯಾಗಿರುವ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…