ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ.
‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ.
ಭಾನುವಾರದ ಸಂಚಿಕೆಯಲ್ಲಿ ದಿವಂಗತ ಅಂಬರೀಶ್ ಅವರಿಗೆ ಬಿಗ್‍ಬಾಸ್ ಸ್ಪರ್ಧಿಗಳು ಹಾಡುಗಳನ್ನು ಹೇಳುವ ಮೂಲಕ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದರು. ಈ ವೇಳೆ ಸ್ಪರ್ಧಿಗಳು ಅಂಬರೀಶ್ ಬಗ್ಗೆ ತನ್ನ ಅನಿಸಿಕೆಗಳನ್ನು ಹೇಳಿಕೊಂಡಿದ್ದರು.
ಸೋನು ಪಾಟೀಲ್ ಮಾತನಾಡಿ, ಈಗಾಗಲೇ ನಾನು ಬೆಂಗಳೂರಿಗೆ ಬಂದು ತುಂಬಾ ಕಷ್ಟ ಪಟ್ಟಿದ್ದೀನಿ ಅಂತ ನಿಮೆಲ್ಲರಿಗೂ ಗೊತ್ತಿದೆ. ನಾನು ಬೆಂಗಳೂರಿಗೆ ಬಂದು ಅಂಬರೀಶ್ ಅವರ ಮನೆಯಲ್ಲಿ ಹೊಟ್ಟೆ ತುಂಬಾ ಊಟ ಮಾಡಿದ್ದೇನೆ. ನಾನು ನಗರಕ್ಕೆ ಬಂದಾಗ ಹಣ ಮತ್ತು ತಿನ್ನಲೂ ಊಟವೂ ಇರಲಿಲ್ಲ. ಕೆಲಸಕ್ಕಾಗಿ ಅಲೆದಾಡುತ್ತಿದ್ದೆ. ಆಗ ಜೆ.ಪಿ ನಗರದಲ್ಲಿ ಯಾವುದೋ ಕೆಲಸ ಇದೆ ಎಂದು ಹೇಳಿದಾಗ ನಾನು ಅಲ್ಲಿಗೆ ಹೋದೆ.
ನಮ್ಮ ತಾಯಿ ಅಂಬರೀಶ್ ಅವರ ಅಭಿಮಾನಿ. ಆದ್ದರಿಂದ ನಾನು ಒಮ್ಮೆ ಅಂಬರೀಶ್ ಅವರನ್ನು ಭೇಟಿ ಮಾಡಬೇಕು ಎಂದು ಅವರ ಮನೆಗೆ ಹೋಗಿದ್ದೆ. ನಾವು ಉತ್ತರ ಕರ್ನಾಟಕದವರು, ನಮ್ಮ ತಂದೆ ಒಬ್ಬ ರೈತರು, ಈಗ ಅವರಿಗೆ ಹೃದಯ ಕಸಿಮಾಡಿಸಬೇಕು ಎಂದು ಹೇಳಿಕೊಂಡೆ. ನಾನು ಉತ್ತರ ಕರ್ನಾಟಕ ಎಂದಾಕ್ಷಣ, ಅವರು ನೀವು ಕಲಾವಿದರಿಗೆ ಬಹಳ ಗೌರವ ಕೊಡುತ್ತೀರಿ. ನಿಮ್ಮನ್ನು ಗೌರವಿಸಬೇಕಾದುದ್ದು ನಮ್ಮ ಕರ್ತವ್ಯ ಎಂದು ಕೂರಿಸಿಕೊಂಡು ಮಾತನಾಡಿಸಿದರು ಅಂತ ಸೋನು ಹೇಳಿಕೊಂಡಿದ್ದಾರೆ.
ಅವರು ನೀನು ಊಟ ಮಾಡಿ ಬಹಳ ದಿನವಾಗಿದೆ ಅನ್ನಿಸುತ್ತಿದೆ, ಊಟ ಮಾಡು ಎಂದು ಹೇಳಿದರು. ನಿಜ ಹೇಳಬೇಕು ಅಂದರೆ ನನಗೆ ತುಂಬಾ ಹೊಟ್ಟೆ ಹಸಿವಾಗುತ್ತಿತ್ತು. ಕೊನೆಗೆ ಅವರ ಪಕ್ಕದಲ್ಲಿಯೇ ಕೂರಿಸಿಕೊಂಡು ಊಟ ಹಾಕಿದರು. ಅದನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ ತುಂಬಾ ಹೊಟ್ಟೆ ಹಸಿವಾದಾಗ ನನಗೆ ಊಟ ಹಾಕಿದ ಮೊದಲ ವ್ಯಕ್ತಿ ಅವರಾಗಿದ್ದಾರೆ.
ಇಂದು ಅವರು ನಮ್ಮ ಮಧ್ಯೆ ಇಲ್ಲ. ಆದರೆ ನಮ್ಮ ಮನಸ್ಸಿನಲ್ಲಿ ಸದಾ ಇರುತ್ತಾರೆ. ಮತ್ತೆ ಈ ಕನ್ನಡನಾಡಿನಲ್ಲಿ ಹುಟ್ಟಿ ಬರಬೇಕು ಎಂದು ಅಂಬಿ ಜೊತೆಗಿನ ಕ್ಷಣವನ್ನು ಹೇಳಿಕೊಂಡು ಸೋನು ಪಾಟೀಲ್ ಕಣ್ಣೀರು ಹಾಕಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…