ಸುದ್ದಿ

ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಮಾರಾಟ: ಪ್ರಜೆಗಳಿಂದ ಆಕ್ರೋಶ

100

ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಟ್ವಿಟರ್‌ನಲ್ಲಿ #BoycottAmazon ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡಿಂಗ್‌ ಆಗುತ್ತಿದೆ.

ಈ ಸಂಬಂಧ ಟ್ವೀಟ್‌ ಮಾಡಿದ ಸುಶೀಲ್‌ ದೀಕ್ಷಿತ್‌ ಎಂಬಾತ ”ತಪ್ಪು ಒಂದು ಬಾರಿ ಮಾಡಿದರೂ ತಪ್ಪೇ, ಎರಡು ಬಾರಿ ಮಾಡಿದರೂ ತಪ್ಪೇ. ಆದರೆ, ಅಮೆಜಾನ್‌ ಮಾತ್ರ ಪ್ರತಿ ಬಾರಿಯೂ ತಪ್ಪು ಮಾಡುತ್ತಿರುತ್ತದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದರಿಂದ ಅದಕ್ಕೆ ಖುಷಿ ಎಂದು ಕಾಣುತ್ತೆ. ಇಸ್ಲಾಂ ಅಥವಾ ಕ್ರೈಸ್ತ ಧರ್ಮಕ್ಕೂ ಇದೇ ರೀತಿ ಮಾಡುತ್ತೀರಾ? ಹಿಂದೂಗಳು ಸಾಫ್ಟ್ ಟಾರ್ಗೆಟ್‌ಗಳಾ ? ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದರು. ಅಲ್ಲದೆ, #BoycottAmazon ಎಂಬ ಹ್ಯಾಶ್‌ಟ್ಯಾಗ್‌ ಅನ್ನು ಸಹ ಬಳಸಿದ್ದ.

ಬಳಿಕ, ಹಲವು ನೆಟ್ಟಿಗರು ಸುಶೀಲ್‌ ದೀಕ್ಷಿತ್‌ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸುಶೀಲ್‌ ಟ್ವೀಟ್‌ ವೈರಲ್‌ ಆಗಿದೆ. ಅಲ್ಲದೆ, ಅಮೆಜಾನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಜತೆಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅನ್ನು ಸಾವಿರಾರು ನೆಟ್ಟಿಗರು ಟ್ಯಾಗ್‌ ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • ಸುದ್ದಿ

    ಪ್ರೀತಿಯೇ ವಿಷವಾಯ್ತ..!ಪ್ರೇಯಸಿ ತಂದುಕೊಟ್ಟ ವಿಷ ಸೇವಿಸಿ ಪ್ರೇಮಿ ಸಾವು….

    ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಜ್ಯೋತಿಷ್ಯ

    ರೈತರ ಗಮನಕ್ಕೆ: ‘ಕಿಸಾನ್ ಸಮ್ಮಾನ್’ ಗೆ ಅರ್ಜಿ ಸಲ್ಲಿಸಲು ಇನ್ನೆರಡೇ ದಿನ ಬಾಕಿ

    ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…