ಸಿನಿಮಾ

ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

283

ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆದ್ದರಿಂದ ಬೆಂಗಳೂರು ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಕಂಠೀರವ ಸ್ಟುಡಿಯೋದ ಗೇಟ್ ಬಳಿ ಜಯಪ್ರದಾ ಅವರು ನಿಂತಿದ್ದರು. ನೂಕುನುಗ್ಗಲು ಉಂಟಾಗುತ್ತಿದ್ದಂತೆ ಅಣ್ಣಾಮಲೈ, ಕಾರಿನಲ್ಲಿ ಕುಳಿತುಕೊಳ್ಳುವಂತೆ ಜಯಪ್ರದಾ ಅವರಿಗೆ ಸೂಚಿಸಿದ್ದಾರೆ.

ಡಿಸಿಪಿ ಅಣ್ಣಾಮಲೈ ಅವರು ಹೇಳಿದ್ದ ಮಾತನ್ನು ತಪ್ಪಾಗಿ ತಿಳಿದುಕೊಂಡ ನಟಿ ಜಯಪ್ರದಾ, ಸ್ಥಳದಲ್ಲಿಯೇ ಅವರ ವಿರುದ್ಧ ಕೂಗಾಡಿದ್ದಾರೆ. ಅಣ್ಣಾಮಲೈ ಡಿಸಿಪಿ ಆದರೆ ನಾನು ಮಾಜಿ ಸಂಸದೆಯಾಗಿದ್ದಾನೆ. ಅದರಲ್ಲೂ ನಾನೊಬ್ಬ ಮಹಿಳೆ. ನಮಗೆ ಭದ್ರತೆ ಒದಗಿಸಬೇಕು ಅವರು. ಯಾವುದೇ ತೊಂದರೆಯಾಗದಂತೆ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಣ್ಣಾಮಲೈ ವಿರುದ್ಧ ಜಯಪ್ರದಾ ಕಿಡಿಕಾರಿದ್ದಾರೆ.ಇದಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಉಪಯುಕ್ತ ಮಾಹಿತಿ

    ರಸ್ತೆಗಳ ಮೇಲೆ ಹಾಕಿರುವ ಹಳದಿ ಮತ್ತು ಬಿಳಿ ಪಟ್ಟಿಗಳ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • ಸಿನಿಮಾ

    ತನಗೆ ಅನ್ಯಾಯ ಆಗಿದೆಯೆಂದು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ನಟಿ..?ಯಾರು, ಏಕೆ ಗೊತ್ತಾ.?ತಿಳಿಯಲು ಮುಂದೆ ಓದಿ ಶಾಕ್ ಆಗ್ತೀರಾ…

    ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…