ಸಿನಿಮಾ

ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

277

ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ಆದ್ದರಿಂದ ಬೆಂಗಳೂರು ಪೊಲೀಸರು ಬಿಗಿ ಭದ್ರತೆಯನ್ನು ಒದಗಿಸಿದ್ದರು. ಆಗ ಕಂಠೀರವ ಸ್ಟುಡಿಯೋದ ಗೇಟ್ ಬಳಿ ಜಯಪ್ರದಾ ಅವರು ನಿಂತಿದ್ದರು. ನೂಕುನುಗ್ಗಲು ಉಂಟಾಗುತ್ತಿದ್ದಂತೆ ಅಣ್ಣಾಮಲೈ, ಕಾರಿನಲ್ಲಿ ಕುಳಿತುಕೊಳ್ಳುವಂತೆ ಜಯಪ್ರದಾ ಅವರಿಗೆ ಸೂಚಿಸಿದ್ದಾರೆ.

ಡಿಸಿಪಿ ಅಣ್ಣಾಮಲೈ ಅವರು ಹೇಳಿದ್ದ ಮಾತನ್ನು ತಪ್ಪಾಗಿ ತಿಳಿದುಕೊಂಡ ನಟಿ ಜಯಪ್ರದಾ, ಸ್ಥಳದಲ್ಲಿಯೇ ಅವರ ವಿರುದ್ಧ ಕೂಗಾಡಿದ್ದಾರೆ. ಅಣ್ಣಾಮಲೈ ಡಿಸಿಪಿ ಆದರೆ ನಾನು ಮಾಜಿ ಸಂಸದೆಯಾಗಿದ್ದಾನೆ. ಅದರಲ್ಲೂ ನಾನೊಬ್ಬ ಮಹಿಳೆ. ನಮಗೆ ಭದ್ರತೆ ಒದಗಿಸಬೇಕು ಅವರು. ಯಾವುದೇ ತೊಂದರೆಯಾಗದಂತೆ ಭದ್ರತೆ ನೀಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಅಣ್ಣಾಮಲೈ ವಿರುದ್ಧ ಜಯಪ್ರದಾ ಕಿಡಿಕಾರಿದ್ದಾರೆ.ಇದಕ್ಕೆ ಈಗ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…