ಸಿನಿಮಾ

ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

519

ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು.

ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ ಗಡ್ಡ ತೆಗೆಯುವಂತೆ ವಾರ್ನ್ ಮಾಡುತ್ತಿದ್ದರು.

ಅಲ್ಲದೇ ಅಂಬರೀಶ್ ಅವರ 66ನೇ ವರ್ಷದ ಹುಟ್ಟುಹಬ್ಬದ ಸಮಯದಲ್ಲಿ ಬೆಂಗಳೂರಿನ ಕಲಾವಿದರ ಸಂಘ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೊದಲು ಯಶ್ ಅವರು ಹಿರಿಯ ನಟಿ ಸುಮಲತಾ ಅವರ ಅನುಮತಿ ಪಡೆದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗಡ್ಡ ತೆಗೆಯದೇ ಅಂಬಿ ಮುಂದೆ ಹೋದರೇ ಬೈಯುತ್ತಾರೋ ಏನೋ ಎಂದು ಮೊದಲು ನಟಿ ಸುಮಲತಾಗೆ ಕಾಲ್ ಮಾಡಿ ಕನ್ಫರ್ಮ್ ಮಾಡಿಕೊಂಡು ಯಶ್, ಅಂಬಿ ಸನ್ಮಾನ ಕಾರ್ಯಕ್ರಮಕ್ಕೆ ಹೋಗಿದ್ದರು.

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೂ ಅಂಬರೀಶ್ ಈ ಹಿಂದೆ ವಾರ್ನ್ ಮಾಡಿದ್ದರು. ಅಂಬರೀಶ್ ಅವರ 66ನೇ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಧ್ರುವ ಅವರ ಮನೆಗೆ ಹೋಗಿದ್ದರು. ಈ ವೇಳೆ ಅಂಬಿಗೆ ವಿಶ್ ಮಾಡಿ ಸ್ವಲ್ಪ ಹೊತ್ತು ಅವರ ಜೊತೆ ಸಮಯ ಕಳೆದಿದ್ದಾರೆ. ಇದೇ ವೇಳೆ ಧ್ರುವ ಸರ್ಜಾ ಒಂದು ಸಿನಿಮಾಗೆ ಕಮಿಟ್ ಆದ ಮೇಲೆ ಮತ್ತೊಂದು ಸಿನಿಮಾಗೆ ಕೈಹಾಕಲ್ಲ.

ಆದ್ದರಿಂದ ಎರಡು ವರ್ಷಕ್ಕೆ ಒಂದೊಂದು ಸಿನಿಮಾ ಮಾಡಿಕೊಂಡು ಕೂರಬೇಡ, ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡೋದನ್ನು ಕಲಿ ಅಂತ ಅಂಬಿ ತಮ್ಮ ಸ್ಟೈಲ್ ನಲ್ಲೇ ಧ್ರುವಗೆ ವಾರ್ನ್ ಮಾಡಿದ್ದರು.ಅಂಬರೀಶ್ ಅವರ ಮಾತು ಕೇಳಿ ಅರೆಕ್ಷಣ ಶಾಕ್ ಆದ ಧ್ರುವ ಇನ್ಮುಂದೆ ವರ್ಷಕ್ಕೆ ಎರಡು ಸಿನಿಮಾ ಮಾಡಲು ನಿರ್ಧಾರ ಮಾಡಿದ್ದರಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ವಿಜ್ಞಾನ

    ಐಐಟಿ ಪ್ರಯೋಗ ಯಶಸ್ವಿಗೊಂಡಿದ್ದು, ಇನ್ಮುಂದೆ ಕೋಳಿಯ ಬದಲು ಗಿಡದಲ್ಲಿ ಮೊಟ್ಟೆಗಳು ಬೆಳೆಯಲಿವೆ ,.!

    ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್​ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್​ ಸಾಯ್​, ಗ್ಲುಟೆನ್​ಮುಕ್ತವಾಗಿರುವ ಈ ಮೊಟ್ಟೆಯನ್ನು…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…