ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ.
ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈಗ ಯಂತ್ರಕ್ಕೆ ದೇಶ ಹಾಗೂ ಹೊರದೇಶಗಳಿಂದಲೂ ಬೇಡಿಕೆ ಬರುತ್ತಿದೆ.
ಈಗ ಮರ ಹತ್ತಿ ಕೆಲಸ ಮಾಡಲು ನುರಿತ ಕಾರ್ಮಿಕರು ಸಿಗುತ್ತಿಲ್ಲ ಎಂಬುದು ಕರಾವಳಿಯ ಅಡಕೆ ಬೆಳೆಗಾರರ ಅಳಲು. ಮರ ಹತ್ತಲು ಹಲವು ಯಂತ್ರಗಳ ಆವಿಷ್ಕಾರಗಳು ಕಾಲಕಾಲಕ್ಕೆ ನಡೆಯುತ್ತಲೇ ಇವೆ. ಇದಕ್ಕೊಂದು ಸೇರ್ಪಡೆ ಮರ ಹತ್ತುವ ಬೈಕ್. ಇದರ ಮೂಲ ಉದ್ದೇಶವೇ ಯಾರ ಸಹಾಯವೂ ಇಲ್ಲದೆ ಮರ ಹತ್ತುವುದು. ಸದ್ಯಕ್ಕೆ ಅಡಕೆ ಮರ ಹತ್ತಲು ಉಪಯೋಗವಾಗುತ್ತಿರುವ ಈ ಯಂತ್ರವನ್ನು ಪರಿಷ್ಕರಿಸಿ, ತೆಂಗಿನ ಮರ ಹತ್ತುವಂತೆ ಮಾಡುವ ಯೋಜನೆಯನ್ನು ಗಣಪತಿ ಭಟ್ ಹಾಕಿಕೊಂಡಿದ್ದಾರೆ.
ಬೈಕ್ ಮಾದರಿ ಯಂತ್ರ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇದನ್ನು ಗಮನಿಸಿರುವ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಂತ್ರದ ಉತ್ಪಾದನೆ ಹಕ್ಕನ್ನು ಪಡೆಯಲು ಉತ್ಸುಕರಾಗಿದ್ದಾರೆ. ಮಹೀಂದ್ರಾ ಮಾತ್ರವಲ್ಲ, ನಾನು ಯಾವುದೇ ಕಂಪನಿಗೆ ಈ ಯಂತ್ರದ ಉತ್ಪಾದನೆ ಹಕ್ಕು ನೀಡಲು ಸಿದ್ಧನಿಲ್ಲ. ನಾನೇ ಉತ್ಪಾದಿಸಿ ರೈತರಿಗೆ ತಲುಪಿಸುತ್ತೇನೆ. ಅದಕ್ಕಾಗಿ ಪ್ರತ್ಯೇಕ ತಂಡ ರೂಪಿಸುತ್ತೇನೆ ಎಂದು ತಿಳಿಸಿದ್ದಾರೆ. ಅಡಕೆ ಮರ ಏರುವ ಯಂತ್ರಕ್ಕೆ ಜಿಲ್ಲೆ, ಹೊರ ಜಿಲ್ಲೆಗಳು ಸೇರಿದಂತೆ ಕೇರಳದಿಂದಲೂ ಬೇಡಿಕೆ ಬರುತ್ತಿದೆ. ಪ್ರತಿ ಯಂತ್ರಕ್ಕೆ 75 ಸಾವಿರ ರು ದರ ನಿಗದಿ ಪಡಿಸಿದ್ದಾರೆ, ಇದಕ್ಕಾಗಿ ಬಿಸಿ ರೋಡ್ ನಲ್ಲಿ ಶಾಪ್ ಕೂಡ ತೆರದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.