ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ.
1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ಸೇನೆಯವರು ಮೊದಲು ಉತ್ತಯ್ಯ ಮಿಸ್ಸಿಂಗ್ ಎಂದು, ನಂತರ ಅವರು ನಿಧನರಾಗಿದ್ದಾರೆ ಎಂದು ಹೇಳಿದ್ದರು. ಅದಕ್ಕೆ ಸಾಕ್ಷಿ ಕೊಡಿ ಎಂದು ಪಾರ್ವತಿ ಇದುವರೆಗೂ ಪತಿಗಾಗಿ ಕಾಯುತ್ತಿದ್ದಾರೆ.
ಆಗಸ್ಟ್ 1999ರಂದು, ಉತ್ತರಪ್ರದೇಶದಲ್ಲಿ ಸ್ನಿಗ್ನಲ್ ಬೆಟಾಲಿಯನ್‍ನಲ್ಲಿ ಲಾನ್ಸ್ ನಾಯಕ್ ಆಗಿದ್ದ ಉತ್ತಯ್ಯ ಮನೆಗೆ ಬಂದಿದ್ದರು. 20 ದಿನ ಇದ್ದು ಗರ್ಭಿಣಿ ಪತ್ನಿಗೆ ದೇಶ ಸೇವೆ ಮುಗಿಸಿ ಬೇಗ ಹಿಂದಿರುಗಿ ಬರುತ್ತೇನೆ ಎಂದು ಹೇಳಿ ಅಲಹಾಬಾದ್‍ನ ತನ್ನ ಯುನಿಟ್‍ಗೆ ವಾಪಾಸ್ ಹೋಗಿದ್ದರು. ಬಳಿಕ ನವೆಂಬರ್ 21ರಂದು ಪತ್ನಿಗೆ ಕರೆ ಮಾಡಿ ಹುಷಾರಿಲ್ಲ ಎಂದು ಹೇಳಿದ್ದರು. ಅದೇ ಕಡೆಯ ಕರೆ, ಆ ನಂತರ ಮತ್ತೆ ಕರೆಯೇ ಬರದಿರೋದ್ರಿಂದ ಆತಂಕಕ್ಕೀಡಾದ ಕುಟುಂಬಕ್ಕೆ ಡಿಸೆಂಬರ್ 4ಕ್ಕೆ ಒಂದು ಟೆಲಿಗ್ರಾಂ ಬಂತು. ಕಡೆಗೂ ಪತಿಯಿಂದ ಟೆಲಿಗ್ರಾಂ ಬಂತು ಎಂದುಕೊಂಡಿದ್ದ ಪತ್ನಿಗೆ ದೊಡ್ಡ ಆಘಾತವೇ ಕಾದಿತ್ತು.
ಆ ಟೆಲಿಗ್ರಾಂನಲ್ಲಿ ಉತ್ತಯ್ಯ ಸೈನ್ಯದ ಯುನಿಟ್‍ನಲ್ಲಿಲ್ಲ ಊರಲ್ಲಿದ್ರೆ ಕಳುಹಿಸಿಕೊಡಿ ಎಂದು ಬರೆಯಲಾಗಿತ್ತು. ಆ ಸುದ್ದಿ ಕೇಳಿ ಶಾಕ್‍ಗೆ ಒಳಗಾದ ಯೋಧ ಉತ್ತಯ್ಯನ ಗರ್ಭಿಣಿ ಪತ್ನಿಗೆ ಡೆಲಿವರಿಯಾಗಿ ಮಗು ಕೂಡ ಸಾವನ್ನಪ್ಪಿತ್ತು. ದಿನ ಕಳೆದಂತೆ ಸುಧಾರಿಸಿಕೊಂಡು ಪತಿಗಾಗಿ ಹುಡುಕಾಟ ನಡೆಸಿ ಸೈನ್ಯದ ಯುನಿಟ್‍ಗೂ ಹೋಗಿ ಬಂದರೂ ಪತಿಯ ಸುಳಿವೇ ಸಿಗಲಿಲ್ಲ. ಕಡೆಗೆ ಸೇನೆ ಜೂನ್ 14ಕ್ಕೆ ಉತ್ತಯ್ಯ ನಿಧನರಾಗಿದ್ದಾರೆ ಎಂದು ಪತ್ರ ಕಳುಹಿಸಿದ್ದರು.
ಪತ್ರ ಕಳುಹಿಸಿದ ನಂತರ 2010ರಿಂದ ಯೋಧನ ಪತ್ನಿಗೆ ಪಿಂಚಣಿ ಕೊಡುವುದಕ್ಕೆ ಶುರು ಮಾಡಿದ ಸರ್ಕಾರ ಮೃತದೇಹವಾಗಲಿ, ಎಲ್ಲಿ, ಹೇಗೆ ನಿಧನರಾದರು ಎಂದಾಗಲೀ ಯೋಧನ ಕುಟುಂಬಕ್ಕೆ ಮಾಹಿತಿಯೇ ಕೊಟ್ಟಿಲ್ಲ. ಹೀಗಾದರೆ ಹೇಗೆ ಸೈನ್ಯ ನಂಬಿ ಯೋಧರನ್ನಾಗಿ ದೇಶ ಸೇವೆಗೆ ನಮ್ಮವರನ್ನು ಕಳುಹಿಸೋದು ಎಂದು ಪಾರ್ವತಿ ಹಿತೈಷಿಗಳು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.