ಆರೋಗ್ಯ

ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

216

ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು ಮಕ್ಕಳಲ್ಲಿ ಕಂಡುಬರುವ ಕಣ್ಣಿನ ಕ್ಯಾನ್ಸರ್‌ನ ಲಕ್ಷಣಗಳಲ್ಲಿ ಒಂದಾಗಿದೆ. ಆರಂಭದಲ್ಲ ಚಿಕಿತ್ಸೆ ದೊರೆತರೆ ಗುಣಪಡಿಸಬಹುದಾಗಿದೆ. ಮೇ 18ರಂದು ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದ ಮೂಲಕ ಕಣ್ಣಿನ ಕ್ಯಾನ್ಸರ್ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ರಾಮಚಂದ್ರ ತಿಳಿಸಿದ್ದಾರೆ.

ಮಕ್ಕಳಲ್ಲಿ ಬಿಳಿ ಆಕಾರದ ಮಚ್ಚೆ ಇರುವುದು ಅಥವಾ ಮೆಳ್ಳಗಣ್ಣು ಸಮಸ್ಯೆಯನ್ನು ಬಹುತೇಕರು ನಿರ್ಲಕ್ಷಿಸುತ್ತಾರೆ. ಜೊತೆಗೆ ಮೊಬೈಲ್ ಫೋಟೊ ಅಥವಾ ಫ್ಲ್ಯಾಶ್ ಬಳಸಿ ಫೋಟೊದಲ್ಲಿ ಬೆಳ್ಳಗಿನ ಮಚ್ಚೆ ರೀತಿಯಲ್ಲಿ ಕಾಣಿಸಿದರೆ ಅದೂ ಕೂಡ ಕ್ಯಾನ್ಸರ್‌ ಲಕ್ಷಣವಾಗಿರಬಹುದು.ಇಂತಹ ಯಾವುದೇ ಲಕ್ಷಣಗಳಿದ್ದರೂ ನೇತ್ರಾಲಯಕ್ಕೆ ತೆರಳಿ ಪರೀಕ್ಷಿಸಬೇಕು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಚಿರಂಜೀವಿ ಸರ್ಜಾ ಅಭಿಮಾನಿಗಳು ಕಂಡಿದ್ದ ಆ ಕನಸು ಕಡೆಗೂ ಕನಸಾಗಿಯೇ ಉಳಿಯಿತು!

    ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್‌ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್‌ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್‌ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ಸುದ್ದಿ

    ಬರ್ಗರ್ ತಿಂದ ತಕ್ಷಣವೇ ಆಟೋ ಚಾಲಕನ ಬಾಯಿಂದ ರಕ್ತ ಹೊರಬಂತು…ಕಾರಣ?

    ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…

  • ಉಪಯುಕ್ತ ಮಾಹಿತಿ

    ಮುಂದಿನ ತಿಂಗಳಿಂದ 500 ಕಿಮೀ. ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿ ಕಡಿತ..! ತಿಳಿಯಲು ಓದಿ…

    ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.