Archive

ಏಷ್ಯಾ ಬುಕ್ ಆಫ್ ರೆಕಾರ್ಡ್

97

ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ.


ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು ವಿಕೆ” ಕುರಿತು ತರಬೇತಿ ನೀಡಲಾಗಿದೆ. ಈ ತರಬೇತಿಯು ಮಕ್ಕಳಲ್ಲಿ ಕೌಶಲ್ಯ ಮತ್ತು ವ್ಯಕ್ತಿತ್ವ ಬೆಳವಣಿಗೆ ಹೆಚ್ಚಿಸುವಲ್ಲಿ ಕಾರಣವಾಗಿದ್ದು, ಜಿಲ್ಲೆಯಿಂದ ಸಿ.ಮುನಿರಾಜುರವರು ಭಾಗವಹಿಸಿ ಈ ಯಶಸ್ಸು ಪಡೆದಿರುತ್ತಾರೆ. ಇತ್ತೀಚೆಗೆ ತುಮಕೂರು ಜಿಲ್ಲೆಯಲ್ಲಿ ನಡೆದ ಸಮಾರಂಭದಲ್ಲಿ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಪ್ರಶಸ್ತಿ ಸ್ವೀಕರಿಸಿ ಸಿ.ಮುನಿರಾಜು ಮಾತನಾಡಿ, ನನ್ನ ಈ ಸಾಧನೆಗೆ ಸಹಕಾರ ನೀಡಿದ ಜೆಸಿಐ ಸಂಸ್ಥೆ, ಮನೋಬಲ ತಂಡಕ್ಕೆ ಹಾಗೂ ಡಿಡಿಪಿಐ ಕೃಷ್ಣಮೂರ್ತಿರವರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕನ್ನಯ್ಯರವರಿಗೆ, ಹಾಗೂ ಸಿಆರ್‌ಪಿ ಮಧುಸೂದನ್‌ರವರಿಗೆ ಹಾಗೂ ಐತರಸನಹಳ್ಳಿ ಶಾಲೆಯ ಶಿಕ್ಷಕ ವರ್ಗ, ಸಿಬ್ಬಂದಿ ಹಾಗೂ ಶಾಲಾ ಮಕ್ಕಳಿಗೆ ಆಭಾರಿಯಾಗಿರುತ್ತೇನೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಜೆ.ಸಿ.ಐ.ನ ಪದಾಧಿಕಾರಿಗಳು ಹಾಗೂ ನಿರ್ದೇಶಕರಾದ ಜೆ.ಸಿ. ಜನಾರ್ಧನ, ಯೋಜನಾ ನಿರ್ದೇಶಕರಾದ ಜೆ.ಸಿ, ನಯನಾ ಜನಾರ್ಧನ, ಜೆ.ಸಿ, ಉಮಾಮಹೇಶ, ಅಧ್ಯಕ್ಷರಾದ ಜೆ.ಸಿ, ಕುನಾಲ್ ಮಾಣಿಕಚಂದ, ಶಾಲಿನಿ ಮುನಿರಾಜು ಮತ್ತಿತರರು ಹಾಜರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ‘ಸಿಹಿ ಸುದ್ದಿ’…ಇದನ್ನೊಮ್ಮೆ ಓದಿ…!

    ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…