ಸುದ್ದಿ

ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

180

ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…