bank

ಎಟಿಎಂ ನಲ್ಲಿ ‘ನೋಟು’ ಬರದಿದ್ರೆ ಏನು ಮಾಡಬೇಕು…?

123

ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ.

ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ ಮಾಡಿದ್ದು ಸ್ಲಿಪ್ ನಲ್ಲಿ ಬರುತ್ತದೆ. ಆದ್ರೆ ಎಟಿಎಂನಿಂದ ಹಣ ಬಂದಿರುವುದಿಲ್ಲ. ಆಗ ಬ್ಯಾಂಕ್ ಗೆ ಸಾಕ್ಷಿ ತೋರಿಸಲು ಇದು ಬೇಕಾಗುತ್ತದೆ.

ಬೇರೆ ಎಟಿಎಂನಲ್ಲಿ ವ್ಯವಹಾರ ಮಾಡುವಾಗ ಕೆಲವೊಮ್ಮೆ ಮೋಸ ಹೋಗುವ ಸಾಧ್ಯತೆಗಳಿರುತ್ತವೆ. ಆಗ ನೀವು ಪೊಲೀಸರಿಗೆ ದೂರು ನೀಡಬೇಕಾಗುತ್ತದೆ. ನೀವು ಯಾವ ಬ್ಯಾಂಕ್ ಎಟಿಎಂ ಬಳಸಿದ್ದೀರಿ, ನಿಮ್ಮ ಅಕೌಂಟ್ ಯಾವ ಬ್ಯಾಂಕ್ ನಲ್ಲಿದೆ, ನೀವು ಬಳಸಿದ ಎಟಿಎಂ ಶಾಖೆ ಯಾವುದು ಎಂಬುದರ ವಿವರವನ್ನು ಪೊಲೀಸರಿಗೆ ನೀಡಬೇಕಾಗುತ್ತದೆ.

ಬೇರೆ ಬ್ಯಾಂಕ್ ಎಟಿಎಂನಿಂದ ನಕಲಿ ನೋಟುಗಳು ಸಿಕ್ಕರೆ ತಕ್ಷಣ ಹತ್ತಿರವಿರುವ ಆ ಬ್ಯಾಂಕಿನ ಶಾಖೆಗೆ ಹೋಗಿ. ಅಲ್ಲಿ ಎಟಿಎಂನಲ್ಲಿ ಸಿಕ್ಕ ನಕಲಿ ನೋಟನ್ನು ಬದಲಾಯಿಸಿಕೊಳ್ಳಿ. ಪ್ರತಿಯೊಂದು ಬ್ಯಾಂಕ್ ಕೂಡ ನೋಟನ್ನು ಬದಲಾಯಿಸಿ ನೀಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…