ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ.

ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

ಸಮೋಸ ಚಿತ್ರಗಳನ್ನು ಟ್ವೀಟ್ ಮಾಡಿರುವ ಪ್ರಧಾನಿ ಮಾರಿಸನ್, ಮಾವಿನ ಕಾಯಿ ಚಟ್ನಿ ಜೊತೆ ಭಾನುವಾರದ ಸಮೋಸ ತಯಾರಿಸಿದ್ದು, ಈ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಇದೆ. ಅವರು ಸಸ್ಯಾಹಾರಿಯಾಗಿದ್ದು, ನಾನು ಅವರ ಜೊತೆ ಇದನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಮಾರಿಷನ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಎರಡು ರಾಷ್ಟ್ರಗಳು ಹಿಂದೂ ಮಹಾಸಾಗರದ ಜೊತೆ ಸಂಪರ್ಕ ಸಾಧಿಸಿದ್ದು, ಭಾರತದ ಸಮೋಸ ಜೊತೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ. ಸಮೋಸ ರುಚಿಕರವಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಇನ್ನು, ಕೊರೊನಾ ಯುದ್ಧದಲ್ಲಿ ಜಯ ಸಾಧಿಸಿದ ಮೇಲೆ ಜೊತೆಗೂಡಿ ಸಮೋಸ ಸವಿಯೋಣ. ನಾನು ಕೂಡ ಜೂನ್ 4ನೇ ತಾರೀಕಿನ ವಿಡಿಯೋ ಕಾನ್ಫರೆನ್ಸ್ಗಾಗಿ ಕಾಯುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.