ಸುದ್ದಿ

ಪುಟ್ಟ ಮಕ್ಕಳಿಗೆ ವಿಳ್ಯೆದೆಲೆ ಯನ್ನು ಹೊಟ್ಟೆಗೆ ಅಂಟಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ,.!ಇದನೊಮ್ಮೆ ತಿಳಿಯಿರಿ.

73

ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು..

ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ ವಿಳ್ಯೆದೆಲೆಯನ್ನು ಅಂಟಿಸುತ್ತಾರೆ.. ಹೀಗೆ ಮಾಡುವುದರಿಂದ ಮಗುವಿಗೆ ಅಜೀರ್ಣ ಸಮಸ್ಯೆ ಕಂಡುಬರುವುದಿಲ್ಲ.. ಮಲಮೂತ್ರ ವಿಸರ್ಜನೆ ಮಾಡುವಾಗ ಕಷ್ಟವೂ ಆಗುವುದಿಲ್ಲ.

ಮಕ್ಕಳ ಹೊಟ್ಟೆಗೆ ವಿಳ್ಯೆದೆಲೆಯನ್ನು ಅಂಟಿಸುವ ವಿಧಾನ.

ಮೊದಲು ಒಂದು ಮಣ್ಣಿನ ದೀಪವನ್ನು ತೆಗೆದುಕೊಳ್ಳಿ ಅದಕ್ಕೆ ಹರಳೆಣ್ಣೆಯನ್ನು ಹಾಕಿ ಬತ್ತಿ ಯನ್ನು ಹಾಕಿ ಸಿದ್ಧಪಡಿಸಿಕೊಳ್ಳಿ ನಂತರ 4 ರಿಂದ 5 ವಿಳ್ಯೆದೆಲೆಯನ್ನು ತೆಗೆದುಕೊಂಡು ಅದಕ್ಕೆ ಕೊಬ್ಬರಿ ಎಣ್ಣೆ ಅಥವಾ ಹರಳೆಣ್ಣೆಯನ್ನು ಸವರಿ ನಂತರ ದೀಪವನ್ನು ಹಚ್ಚಿ ವಿಳ್ಯೆದೆಲೆಯನ್ನು ಆ ದೀಪದಿಂದ ಬಿಸಿ ಮಾಡಿಕೊಳ್ಳಿ  ಬೆಚ್ಚಗಾದ ಎಲೆಗಳನ್ನು ಮಗುವಿನ ಹೊಟ್ಟೆಯ ಭಾಗದಲ್ಲಿ ಅಂಟಿಸುತ್ತಾ ಬನ್ನಿ.

ನಂತರ ಒಂದು ಬಟ್ಟೆಯಿಂದ ವಿಳ್ಯೆದೆಲೆ ಒಳಗಿರುವಂತೆ ಹೊಟ್ಟೆಯನ್ನು ಮೆಲ್ಲಗೆ ಸುತ್ತಿ.ಒಂದೆರೆಡು ಘಂಟೆ ಹಾಗೆ ಇರಲು ಬಿಡಿ.. ಹೆಚ್ಚಿನ ಸಮಯವಿದ್ದರೇ ಏನೂ ಅಪಾಯವಿಲ್ಲ.ಆದರೇ ಎಲೆಯ ಬಿಸಿ ಯನ್ನು ನೀವೊಮ್ಮೆ ಪರೀಕ್ಷಿಸಿ ನಂತರ ಹೊಟ್ಟೆಯ ಮೇಲೆ ಇಡಿ.. ಕೇವಲ ಬೆಚ್ಚಗಿರುವಾಗ ಮಾತ್ರ ಅಂಟಿಸಿ. ವಿಳ್ಯೆದೆಲೆಯಿಂದ ಮಕ್ಕಳು ಹೊಟ್ಟೆ ಹಗುರ ಅಗಿ ಒಳ್ಳೆಯ ನಿದ್ದೆ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…