ಆರೋಗ್ಯ

ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ? ಈ ಅರೋಗ್ಯ ಮಾಹಿತಿ ನೋಡಿ

130

ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. 
ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿವೆ. 

ಮ್ಮ ಜೀವನದಲ್ಲಿ ನೀರು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನುಷ್ಯನ ದೇಹದಲ್ಲಿ 70% ನೀರು ಇರುತ್ತದೆ. ನಮ್ಮ ದಿನನಿತ್ಯದ ಜೀವನದಲ್ಲೂ ನೀರು ಬೇಕೇ ಬೇಕು. ಆದರೆ ಇತ್ತೀಚೆಗೆ ಮಾಲಿನ್ಯದಿಂದ ಜೀವಜಲ ಕಲುಷಿತವಾಗುತ್ತಿದೆ. ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಬೀರುತ್ತಿದ್ದು, ಹಲವು ಕಾಯಿಲೆಗಳು ಬರುತ್ತಿದೆ. ಹೀಗಾಗಿ ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ನೀರು ಸೇವಿಸಿದರೆ ಆರೋಗ್ಯಕ್ಕೆ ಬಹಳಷ್ಟು ಲಾಭವಿದೆ. 

ಆರ್ಯುವೇದದಲ್ಲಿ ತಾಮ್ರ ಪಾತ್ರೆಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಯಾಕೆಂದರೆ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ಪಿತ್ತ, ಕಫಗಳಲ್ಲಿ ಏರುಪೇರು ಉಂಟಾಗುವುದಿಲ್ಲ. ಅದರಲ್ಲೂ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರಿನಲ್ಲಿ ತುಳಸಿ ಎಲೆಗಳನ್ನು ಹಾಕಿಟ್ಟರೆ ಇನ್ನೂ ಉತ್ತಮ. ಈ ನೀರನ್ನು ಪ್ರತಿನಿತ್ಯ ಕುಡಿದರೆ ಕಫ ಕಡಿಮೆಯಾಗುತ್ತದೆ. ದೇಹದ ಅಂಗಗಳು ಆರೋಗ್ಯಕರವಾಗಿ ಕಾರ್ಯ ನಿರ್ವಹಿಸಲು ಈ ನೀರು ಸಹಕರಿಸುತ್ತದೆ. ಜೊತೆಗೆ ದೇಹದಲ್ಲಿ ವಿಷಕಾರಿ ಆಮ್ಲ ಹೊರಹೊಮ್ಮದಂತೆ ಇದು ತಡೆಯುತ್ತದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದೆ, ಇದು ಹಲವಾರು ಆರೋಗ್ಯಕರ ಪ್ರಯೋಜನ ಗಳನ್ನು ನೀಡುತ್ತದೆ. ಇದು ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ಅಗತ್ಯವಾಗಿವೆ. ಅಲ್ಲದೇ ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.

ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತರ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾಗುತ್ತವೆ. ಅಲ್ಲದೇ ನೀರು ಕುಡಿಯುವ ಅರ್ಹತೆಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿರುತ್ತದೆ. ನೀರನ್ನು ಸಂಗ್ರಹಿಸಲು ಬಳಸುವ ತಾಮ್ರದ ಪಾತ್ರೆಯ ಗುಣಮಟ್ಟವನ್ನು ಪರಿಶೀಲಿಸಿ ಖರೀದಿಸಬೇಕು. ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಮಿತವಾಗಿ ಕುಡಿಯಬೇಕು. ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ 2 ರಿಂದ 3 ಲೋಟ ನೀರು ದೇಹಕ್ಕೆ ಬೇಕಾದ ಅಗತ್ಯ ತಾಮ್ರದ ಅಂಶವನ್ನು ಒದಗಿಸುತ್ತದೆ. ಮನುಷ್ಯ ದೇಹಕ್ಕೆ ಕೇವಲ 6 ಮಿಲಿಗ್ರಾಂ ತಾಮ್ರದ ಅಂಶ ಮಾತ್ರ ಅವಶ್ಯಕವಾಗಿರುತ್ತದೆ. ಒಂದು ವೇಳೆ ಅದಕ್ಕಂತ ಹೆಚ್ಚು ಪ್ರಮಾಣದಲ್ಲಿ ತಾಮ್ರ ನಮ್ಮ ದೇಹ ಸೇರಿದರೆ ಆರೋಗ್ಯಕ್ಕೆ ಹಾನಿಕಾರಕ. 1 ಗ್ರಾಂ ತಾಮ್ರದ ಅಂಶಕ್ಕಿಂತ ಹೆಚ್ಚು ತಾಮ್ರ ನಮ್ಮ ದೇಹ ಸೇರಿದರೆ ಕಿಡ್ನಿ ಸಮಸ್ಯೆ, ಹೊಟ್ಟೆ ನೋವು ಇನ್ನಿತರ ಸಮಸ್ಯೆಗಳು ಬರುತ್ತದೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ತೂಕ ಇಳಿಕೆಗೆ ನೆರವಾಗುತ್ತದೆ : ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಹಾಯ ಮಾಡುತ್ತದೆ ಹಾಗೂ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಳ್ಳುತ್ತದೆ. ಕೊಬ್ಬನ್ನು ಬಳಸಿಕೊಂಡ ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲಾಗುತ್ತದೆ. ಇದು ತೂಕ ಇಳಿಕೆಗೆ ನೆರವಾಗುತ್ತದೆ. ನೀವು ಹೆಚ್ಚು ವ್ಯಾಯಾಮ ಮಾಡದೇ ಪರಿಣಾಮಕಾರಿಯಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ, ಹೆಚ್ಚು ಹೆಚ್ಚಾಗಿ ತಾಮ್ರದ ಪಾತ್ರೆಯಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಪ್ರಾರಂಭಿಸಿ. 

ಚರ್ಮದ ಆರೋಗ್ಯಕ್ಕೆ ಒಳ್ಳೆಯದು : ಚರ್ಮದ ಆರೋಗ್ಯ ರಕ್ಷಣೆಯಲ್ಲಿ ತಾಮ್ರ ಬಹಳ ಸಹಕಾರಿಯಾಗಿದೆ. ತಾಮ್ರದ ಪಾತ್ರೆಗಳಲ್ಲಿ ಇಟ್ಟ ನೀರನ್ನು ಸೇವಿಸುವುದರಿಂದ ಮೆಲನಿನ್ ಉತ್ಪಾದನೆಯಾಗಿ ಚರ್ಮದ ಕಾಂತಿ ಹೆಚ್ಚಾಗುತ್ತದೆ. ಹಾಗೆಯೇ ಚರ್ಮದ ಅಲರ್ಜಿ, ಮೊಡವೆಗಳು ಕೂಡ ಕಡಿಮೆಯಾಗುತ್ತದೆ.


ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ : ತಾಮ್ರದ ಪಾತ್ರೆಯಲ್ಲಿಟ್ಟ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿನ ಬ್ಯಾಕ್ಟೀರಿಯಾ ನಾಶವಾಗುತ್ತವೆ. ಈ ನೀರು ಉರಿಯೂತವನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆ ವ್ಯವಸ್ಥೆ ಉತ್ತಮಗೊಳ್ಳುವಂತೆ ಮಾಡುತ್ತದೆ.

ಹೃದಯಕ್ಕೆ, ವಿಶೇಷವಾಗಿ ಅಧಿಕ ರಕ್ತದೊತ್ತಡಕ್ಕೆ ಒಳ್ಳೆಯದು :ಅಮೇರಿಕನ್ ಕ್ಯಾನ್ಸರ್ ಸೊಸೈಟಿಯ ಪ್ರಕಾರ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು ತಾಮ್ರ ಉತ್ತಮವಾಗಿದೆ. ಅಲ್ಲದೇ ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸಿ ಅಧಿಕ ರಕ್ತದೊತ್ತಡವನ್ನು ತಗ್ಗಿಸಲೂ ನೆರವಾಗುತ್ತದೆ.

ಸಂಧಿವಾತ ಮತ್ತು ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಒಳ್ಳೆಯದು : ತಾಮ್ರದಲ್ಲಿರುವ ಉರಿಯೂತ ನಿವಾರಕ ಗುಣ ಉರಿಯೂತಕ್ಕೆ ಒಳಗಾದ ಸಂಧುಗಳಿಗೆ ಮತ್ತು ಸಂಧಿವಾತ ಕಡಿಮೆಯಾಗಿಸಲು ನೆರವಾಗುತ್ತದೆ. ಈ ತೊಂದರೆ ಇರುವವರು ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಕುಡಿಯಲು ಪ್ರಾರಂಭಿಸುವುದು ಉತ್ತಮ

ತೂಕ ಕಡಿಮೆ ಮಾಡುತ್ತೆ : ಪ್ರತಿನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿಟ್ಟ ನೀರನ್ನು ಸೇವಿಸಿದರೆ ತೂಕವನ್ನು ಇಳಿಸಿಕೊಳ್ಳಬಹುದು. ಕೆಲವೊಮ್ಮೆ ಕಬ್ಬಿಣಾಂಶ ಹೆಚ್ಚಾಗಿರುವ ತರಕಾರಿಗಳು, ಹಣ್ಣುಗಳನ್ನು ತಿಂದು ಡಯಟ್ ಮಾಡಿದರೂ ತೂಕ ಕಡಿಮೆಯಾಗಲ್ಲ. ಹೀಗಾಗಿ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು ತಾಮ್ರದ ಪಾತ್ರೆಗಳಲ್ಲಿಟ್ಟ ನೀರು ಕುಡಿಯುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜೊತೆಗೆ ದೇಹದಲ್ಲಿ ಕೊಬ್ಬಿನಂಶವು ಹೆಚ್ಚಾಗದಂತೆ ತಡೆಯುತ್ತದೆ.

ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ :ತಾಮ್ರ ಕಡಿಮೆಯಾದರೆ ನಮ್ಮ ದೇಹ ಕಬ್ಬಿಣವನ್ನು ಹೀರಿಕೊಳ್ಳುವ ಸಾಮರ್ಥವೂ ಕಡಿಮೆಯಾಗುತ್ತದೆ. ಪರಿಣಾಮ, ರಕ್ತಹೀನತೆ. ಹಾಗಾಗಿ ಆಹಾರದಲ್ಲಿ ಕಬ್ಬಿಣದ ಅಂಶವಿದ್ದರೂ, ಇದನ್ನು ಹೀರಿಕೊಳ್ಳಲು ತಾಮ್ರದ ನೆರವು ಬೇಕೇ ಬೇಕು. ತಾಮ್ರದ ಅಂಶ ದೇಹದಲ್ಲಿ ಹೆಚ್ಚಿದರೆ ಕಬ್ಬಿಣದ ಅಂಶವೂ ಹೆಚ್ಚುತ್ತದೆ, ತನ್ಮೂಲಕ ರಕ್ತಹೀನತೆಯ ತೊಂದರೆ ಇಲ್ಲವಾಗಿಸುತ್ತದೆ

ಗಾಯಗಳು ಬೇಗ ವಾಸಿಯಾಗುತ್ತೆ :
ತಾಮ್ರದ ಪಾತ್ರೆಯಲ್ಲಿಟ್ಟ ನೀರು ಎಷ್ಟು ಆರೋಗ್ಯಕರ?ಾಮ್ರದ ಪಾತ್ರೆ ನೀರಿನಲ್ಲಿ ಬ್ಯಾಕ್ಟಿರಿಯಾ ಹಾಗೂ ವೈರಸ್ ನಾಶಪಡಿಸುವ ಶಕ್ತಿ ಇರುತ್ತದೆ. ಹೀಗಾಗಿ ಈ ನೀರು ಗಾಯಗಳು ಬೇಗನೆ ವಾಸಿಯಾಗಲು ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಈ ನೀರು ಹೆಚ್ಚಿಸಲು ಸಹಕರಿಸುತ್ತದೆ.



About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ