Health

ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

By admin

June 02, 2020

ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ.

ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ ತೊಂದರೆಗಳಿಂದ ರಕ್ಷಣೆ ನೀಡುತ್ತದೆ.

ರಕ್ತಹೀನತೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕಬ್ಬಿಣವೂ ಇದೆ. ನೀರಿನಲ್ಲಿ ನೆನೆಸಿಟ್ಟ ಒಣದ್ರಾಕ್ಷಿಯನ್ನು ಸೇವಿಸುವ ಮೂಲಕ ದೇಹದಲ್ಲಿ ಕಬ್ಬಿಣದ ಪ್ರಮಾಣ ಹೆಚ್ಚುತ್ತದೆ ಹಾಗೂ ರಕ್ತಹೀನತೆಯ ತೊಂದರೆಯಿಂದ ರಕ್ಷಿಸುತ್ತದೆ.

ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ವಿಟಮಿನ್ ಎ, ಬೀಟಾ ಕ್ಯಾರೋಟೀನ್ ಸಹಿತ ಉತ್ತಮ ಪೋಷಕಾಂಶಗಳಿದ್ದು ಇವು ಕಣ್ಣಿಗೆ ಅತ್ಯುತ್ತಮ ಪೋಷಣೆಯನ್ನು ನೀಡುತ್ತವೆ. ಪರಿಣಾಮವಾಗಿ ದೃಷ್ಟಿ ಉತ್ತಮಗೊಳ್ಳುತ್ತದೆ ಹಾಗೂ ದೃಷ್ಟಿಹೀನತೆಯಿಂದ ರಕ್ಷಿಸುತ್ತದೆ.

ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ : ಸುಮಾರು ಹತ್ತು ಹನ್ನೆರಡು ಒಣದ್ರಾಕ್ಷಿಗಳನ್ನು ರಾತ್ರಿ ನೆನೆಸಿ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಸೇವಿಸುವ ಮೂಲಕ ಜೀರ್ಣಶಕ್ತಿ ಉತ್ತಮಗೊಳ್ಳುತ್ತದೆ.

ಮೂಳೆಗಳು ದೃಢಗೊಳ್ಳುತ್ತವೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಇದೆ. ಇದರೊಂದಿಗೆ ಇರುವ ಇನ್ನೂ ಹಲವು ಸೂಕ್ಷ್ಮ ಪೋಷಕಾಂಶಗಳು ಈ ಕ್ಯಾಲ್ಸಿಯಂ ಅನ್ನು ಮೂಳೆಗಳು ಹೀರಿಕೊಳ್ಳಲು ನೆರವಾಗುವ ಮೂಲಕ ಮೂಳೆಗಳು ಆರೋಗ್ಯಕರ ಮತ್ತು ದೃಢವಾಗುತ್ತವೆ.