ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ.

ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.
ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ ಅಸೋಸಿಯೇಷನ್ ಬಂದ್ಗೆ ಬೆಂಬಲ ನೀಡುತ್ತಿರುವ ಕುರಿತು ಮಾಹಿತಿ ನೀಡಿವೆ.

ಈ ನಡುವೆ ಬಿಎಸ್ಸಿಗೆ ಮಾಹಿತಿ ಒದಗಿಸಿರುವ ಅಸೋಸಿಯೇಷನ್ ಜನವರಿ 8 ಮತ್ತು 9 ರಂದು ಬ್ಯಾಂಕ್ ಸೇವೆ ನಿರ್ವಹಿಸುತ್ತವೆ, ಆದರೆ ಕೆಲವೆಡೆ ಬ್ಯಾಂಕ್ ಸೇವೆಗೆ ಅಡಚಣೆ ಆಗಬಹುದು ಎಂದು ತಿಳಿದು ಬಂದಿದೆ.
ಎಐಬಿಇಎ ಹಾಗೂ ಬಿಇಎಫ್ಐಎ ಮುಷ್ಕರಕ್ಕೆ ಬೆಂಬಲ ನೀಡುತ್ತಿರುವುದರಿಂದ ದೇಶದ ಕೆಲವು ಭಾಗದ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈಬಿಟ್ಟು ಇತರೆ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿವೆ ಎಂದು ಬ್ಯಾಂಕ್ ಆಫ್ ಬರೋಡಾ ತಿಳಿಸಿದೆ.

ಎರಡು ದಿನಗಳ ಮುಷ್ಕರದ ಬಳಿಕ ಜನವರಿ 12 ಎರಡನೇ ಶನಿವಾರದ ರಜೆ, 13ರಂದು ಭಾನುವಾರ ವಾರದ ಬಿಡುವು ಹಾಗೂ 14ರಂದು ಮಕರ ಸಂಕ್ರಾಂತಿ/ ಪೊಂಗಲ್ ಹಬ್ಬ ಇರುವುದರಿಂದ ಸರಣಿ ರಜೆಗಳು ಬರಲಿವೆ. ಆದ್ದರಿಂದ ಮುಂದಿನವಾರ ಪೂರಾ ಬ್ಯಾಂಕ್ ಬಂದ್ ಆಗಲಿದ್ದು ಜನರು ಏನಾದರೂ ವ್ಯವಹಾರವಿದ್ದರೆ ಈಗಲೇ ಮುಗಿಸಿಕೊಳ್ಳುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…