ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು.
ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದು ಸ್ವತಃ ಭವಾನಿ ರೇವಣ್ಣ ಅವರೇ ಹೇಳಿಕೊಂಡಿದ್ದು, ಈ ಮೂಲಕ ಪತಿ ಮಾತು ನಿಜ ಎಂದು ಸಮರ್ಥಿಸಿಕೊಂಡಿದ್ದಾರೆ. ಸಾಧನೆಗೆ ಪತಿಯೇ ಸ್ಫೂರ್ತಿ, ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ರೇವಣ್ಣ ಹೇಳಿದ್ದರಲ್ಲಿ ಸತ್ಯ ಇದೆ.
ನಾನು ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಆಗಿದ್ದಾಗ ಹಾಸನ 31ನೇ ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೆನು. ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದ ರೇವಣ್ಣ ಅವರೇ ಸಾಧನೆಗೆ ಸ್ಫೂರ್ತಿ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ಒಂದೂವರೆ ವರ್ಷದಲ್ಲಿ ಡಿಸಿ ಮೇಡಂ ಯಾವುದೇ ಮೀಟಿಂಗ್ ಮಾಡಿಲ್ಲ. ಸುಮ್ಮನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬ ಪತಿ ರೇವಣ್ಣ ವಾದವನ್ನ ಭವಾನಿ ರೇವಣ್ಣ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…