ಸುದ್ದಿ

ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

By admin

November 28, 2019

 ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ.

ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು ವರ್ಷಗಳ ಹಿಂದೆ ಸಿದ್ಧಾರ್ಥ್ ಹಾಗೂ ರಶ್ಮಿ ರೊಮ್ಯಾಂಟಿಕ್ ಸೀನ್‍ನಲ್ಲಿ ನಟಿಸಿದ್ದರು.

ಈ ವಿಡಿಯೋವನ್ನು ಬಿಗ್ ಬಾಸ್ ಮನೆಯಲ್ಲಿ ಪ್ರಸಾರ ಮಾಡಿದ್ದರು. ಸಿದ್ಧಾರ್ಥ್ ವಿಡಿಯೋ ನೋಡಿ ಖುಷಿಪಟ್ಟರೆ, ರಶ್ಮಿ ತಮ್ಮ ಮುಖದ ಮೇಲೆ ಕೈ ಇಟ್ಟುಕೊಂಡು ನಾಚಿಕೊಳ್ಳುತ್ತಾರೆ. ಬಳಿಕ ಇಬ್ಬರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಸಮ್ಮುಖದಲ್ಲಿ ರೊಮ್ಯಾನ್ಸ್ ಮಾಡುತ್ತಾರೆ. ಇವರು ರೊಮ್ಯಾನ್ಸ್ ಮಾಡುವಾಗ ಬಿಗ್ ಬಾಸ್ ‘ಸಾತಿಯಾ’ ಚಿತ್ರದ ‘ಅಯೇ ಉಡಿ ಉಡಿ ಉಡಿ’ ಹಾಡನ್ನು ಪ್ರಸಾರ ಮಾಡಿದ್ದಾರೆ.

ರೊಮ್ಯಾಂಟಿಕ್ ಸೀನ್‍ಗಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಬಳಿ ಬಣ್ಣ ಶರ್ಟ್ ಧರಿಸಿದ್ದಾರೆ. ಇವರ ರೊಮ್ಯಾನ್ಸ್‍ಗಾಗಿ ಹಾಸಿಗೆ ಮೇಲೆ ಗುಲಾಬಿ ದಳದಿಂದ ಹೃದಯದ ಆಕಾರದಲ್ಲಿ ಜೋಡಿಸಲಾಗಿತ್ತು. ಬಳಿಕ ಶೆಹ್ನಾಜ್ ಇಬ್ಬರಿಗೆ ಲಿವಿಂಗ್ ಏರಿಯಾ ಆಗೂ ಸ್ವಿಮ್ಮಿಂಗ್ ಪೂಲ್‍ನಲ್ಲಿ ರೊಮ್ಯಾನ್ಸ್ ಮುಂದುವರಿಸಲು ಹೇಳಿದ್ದಾರೆ. ಸ್ವಿಮ್ಮಿಂಗ್ ಪೂಲ್ ಸಹ ಗುಲಾಬಿ ದಳದಿಂದ ಅಲಂಕರಿಸಲಾಗಿತ್ತು. ಬಳಿಕ ಇಬ್ಬರು ಸ್ವಿಮ್ಮಿಂಗ್ ಪೂಲ್‍ನಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ.