ಉಪಯುಕ್ತ ಮಾಹಿತಿ

ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

166

ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ.

ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ.

ಕ್ಯಾಂಡಲ್ ಆರಿಸುತ್ತಿದ್ದಂತೆ ಕೇಕ್ ಮೇಲೆ ಬ್ಯಾಕ್ಟೀರಿಯಾಗಳ ಪ್ರಮಾಣ ದಿಢೀರನೆ ವೃದ್ಧಿಯಾಗುತ್ತದೆ. ಹಾಗಾಗಿ ಆ ಕೇಕ್ ತಿನ್ನುವುದು ಆರೋಗ್ಯಕ್ಕೆ ಅಪಾಯಕಾರಿ ಎನ್ನುತ್ತಾರೆ ವಿಜ್ಞಾನಿಗಳು. ಕೇಕ್ ಮೇಲೆ ಕ್ಯಾಂಡಲ್ ಇಟ್ಟು ಅದನ್ನು ಆರಿಸುವ ಸಂಪ್ರದಾಯ ಆರೋಗ್ಯಕ್ಕೆ ಮಾರಕ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಸಾಮಾನ್ಯವಾಗಿ ಎಲ್ಲರೂ ತಮ್ಮ ಹುಟ್ಟುಹಬ್ಬಗಳಲ್ಲಿ ಕ್ಯಾಂಡಲ್ ಉರಿಸಿ ಆರಿಸ್ತಾರೆ. ಆದ್ರೆ ಇದುವರೆಗೂ ಈ ಆಚರಣೆಯಲ್ಲಿರೋ ಅಪಾಯದ ಬಗ್ಗೆ ಯಾರೂ ಗಮನ ಹರಿಸಿರಲಿಲ್ಲ. ಮನುಷ್ಯರ ಬಾಯಲ್ಲಿ ಸಾಕಷ್ಟು ಬ್ಯಾಕ್ಟೀರಿಯಾಗಳಿರುತ್ತವೆ. ಆದ್ರೆ ಅವುಗಳಲ್ಲಿ ಬಹುತೇಕ ಯಾವುದೂ ಹಾನಿಕಾರಕವಾಗಿರುವುದಿಲ್ಲ. ಅಕಸ್ಮಾತ್ ಕ್ಯಾಂಡಲ್ ಆರಿಸಿದ ವ್ಯಕ್ತಿಗೇನಾದ್ರೂ ಖಾಯಿಲೆ ಇದ್ರೆ, ಆರೋಗ್ಯ ಸಮಸ್ಯೆ ಇದ್ರೆ ಅಪಾಯ ಗ್ಯಾರಂಟಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…