ಆರೋಗ್ಯ

ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

190

ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ.

ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ತಗ್ಗಿಸುತ್ತದೆ  : ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ ಕಾರಣವಾಗಿವೆ. ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕ್ಯಾನ್ಸರ್‌ನಿಂದ ಕಾಪಾಡುತ್ತದೆ : ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ : ಹಾಗಲಕಾಯಿಯ ರಸದಲ್ಲಿ ಬೀಟಾ-ಕ್ಯಾರೋಟೀನ್ ಮತ್ತು ವಿಟಮಿನ್ ಎ ಪೋಷಕಾಂಶಗಳು ಹೇರಳವಾಗಿರುವುದರಿಂದ ಕಣ್ಣಿಗೆ ಅಗತ್ಯವಾದ ಪೋಷಕಾಂಶಗಳು ದೊರೆತು ಕಣ್ಣಿನ ತೊಂದರೆಗಳಿಂದ ರಕ್ಷಣೆ ನೀಡಿದಂತಾಗುತ್ತದೆ. ಅಲ್ಲದೇ ಉತ್ತಮ ಪ್ರಮಾಣದಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟುಗಳು ಮಧುಮೇಹದ ಕಾರಣದಿಂದಾಗಿ ಉತ್ಪತ್ತಿಯಾಗುವ ದೃಷ್ಟಿದೋಷದಿಂದ (oxidative stress) ಕಣ್ಣುಗಳನ್ನು ಕಾಪಾಡುತ್ತವೆ. ಹಾಗಲಕಾಯಿಯ ನಿಯಮಿತ ಸೇವನೆಯಿಂದ ಕಣ್ಣುಗಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಬರಲು ಸಾಧ್ಯವಾಗುತ್ತದೆ.

ಮೊಡವೆಗಳಿಗೆ : ಹಾಗಲಕಾಯಿಯ ಸೇವನೆಯು ಮೊಡವೆಗಳ ನಿವಾರಣೆಗೆ ಸಹಕಾರಿಯಾಗಿದೆ ಮಾತ್ರವಲ್ಲದೇ ಆಳವಾದ ಚರ್ಮದ ಸೋಂಕುಗಳಿಗೂ ಶಮನಕಾರಿಯಾಗಿದೆ. ಹಾಗಲಕಾಯಿಯ ರಸವನ್ನು ನಿಂಬೆ ಹಣ್ಣಿನ ರಸದೊಂದಿಗೆ ಬೆರೆಸಿ, ಪ್ರತಿದಿನ ಖಾಲಿ ಹೊಟ್ಟೆಗೆ 6 ತಿಂಗಳುಗಳ ಕಾಲ ಸೇವಿಸಿರಿ ಇಲ್ಲವೇ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯುವವರೆಗೆ ಸೇವನೆಯನ್ನು ಮುಂದುವರೆಸಿರಿ.

ರಕ್ತವನ್ನು ಶುದ್ಧೀಕರಿಸುತ್ತದೆ : ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಸೇವಿಸುವುದರಿಂದ ರಕ್ತ ಶುದ್ಧಿಗೊಂಡು ಚರ್ಮದ ವಿವಿಧ ತೊಂದರೆಗಳು ಮಾಯವಾಗಿ ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ. ಶುದ್ದೀಕರಣಗೊಂಡ ರಕ್ತದ ಮೂಲಕ ಇಡಿಯ ಶರೀರ ಆರೋಗ್ಯದಿಂದ ಕಂಗೊಳಿಸುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಮಾಡುತ್ತದೆ ಹಾಗಲಕಾಯಿಯಲ್ಲಿ ಫೈಟೋನ್ಯೂಟ್ರಿಯೆಂಟ್‌ಗಳೆಂಬ ಆಂಟಿ ಆಕ್ಸಿಡೆಂಟುಗಳಿದ್ದು ಇವು ಕೆಟ್ಟ ಕೊಲೆಸ್ಟಾಲ್ ಕಣಗಳನ್ನು ತಮ್ಮೊಂದಿಗೆ ಅಂಟಿಸಿಕೊಂಡು ಹೋಗುವ ಕ್ಷಮತೆ ಪಡೆದಿವೆ. ಹಾಗಲಕಾಯಿಯನ್ನು ತರಕಾರಿಯ ರೂಪದಲ್ಲಿ ಆಲಿವ್ ಎಣ್ಣೆಯೊಡನೆ ಸೇವಿಸಿದರೆ ಕೊಂಚ ಕಹಿ ಎನಿಸಿದರೂ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ನಿವಾರಿಸುವ ಮೂಲಕ ಆರೋಗ್ಯವನ್ನು ವೃದ್ಧಿಸುತ್ತದೆ.

ಮಧುಮೇಹ ಗುಣಪಡಿಸಲು ನೆರವಾಗುತ್ತದೆ :ಬಾಳೆಹಣ್ಣು ಹಣ್ಣುಗಳು ಆರೋಗ್ಯ ರಹಸ್ಯಗಳನ್ನು ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. insulin ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ