ಸರ್ಕಾರಿ ಯೋಜನೆಗಳು

ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

24

‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಕಂಪನಿಯಿಂದ ಹಣ ವಸೂಲಿ ಮಾಡಲಾಗುವುದು. ಎಷ್ಟೇ ದುಬಾರಿ ವೆಚ್ಚವಾದರೂ ದೃಷ್ಟಿ ಸಮಸ್ಯೆಗೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದು ಸರ್ಕಾರದ ಜವಾಬ್ದಾರಿ. ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಔಷಧ ಕಂಪನಿ ವಿರುದ್ಧ ಕ್ರಮ: ಪ್ರಕರಣ ಸಂಬಂಧ ಜಯದೇವ ಹೃದ್ರೋಗ ಸಂಸ್ಥೆಯ ಡಾ. ರವೀಂದ್ರ ನೇತೃತ್ವದಲ್ಲಿ ಸತ್ಯಶೋಧನ ರಚಿಸಲಾಗಿದ್ದು, ಸಮಿತಿಯಿಂದ ಮಾಹಿತಿ ಪಡೆಯಲಾಗಿದೆ. ಔಷಧ ತಯಾರಿಕಾ ಸಂಸ್ಥೆಯಿಂದ ಪೂರೈಕೆಯಲ್ಲಿ ತಪ್ಪಾಗಿದೆ ಎಂಬ ಮಾಹಿತಿ ಬಂದಿದ್ದು, ಸಂಬಂಧಪಟ್ಟ ಇಲಾಖೆಗೆ ನೋಟಿಸ್ ನೀಡಲಾಗಿದೆ. ಕಂಪನಿಯನ್ನು ಕಪು್ಪಪಟ್ಟಿಗೆ ಸೇರಿಸಲಾಗುವುದು ಎಂದರು.

ವೈದ್ಯರಿಗೆ ರಕ್ಷಣೆ: ಸಂತ್ರಸ್ತರ ಪರ ನ್ಯಾಯ ಕೇಳಲು ನಡೆಸಿದ ಪ್ರತಿಭಟನೆ ವೇಳೆ ಪಿಜಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಆಡಳಿತ ಮಂಡಳಿಯಿಂದ ಆದ ತಪ್ಪಿಗೆ ವೈದ್ಯ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದು ಸರಿಯಲ್ಲ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದರ ಜತೆಗೆ ಹಲ್ಲೆ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಾಗುವುದು ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ